ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಽಕಾರಿಯಾಗಿ ಶಶಿಧರ ಕುರೇರ ಅವರು ಶನಿವಾರ ಅಽಕಾರ ವಹಿಸಿಕೊಂಡರು.
ಕುರೇರ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ, ಬೆಳಗಾವಿ ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಬಾಗಲಕೋಟೆಯಲ್ಲಿ ಎರಡು ಬಾರಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ೨೦೧೮ ರಲ್ಲಿ ಐ.ಎ.ಎಸ್ ಪದೋನ್ನತಿ ಹೊಂದಿದ ಮೇಲೆ ರಾಯಚೂರು ಜಿಲ್ಲೆಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಬಾಗಲಕೋಟೆ ಜಿ.ಪಂ ಸಿಇಒ ಅಧಿಕಾರ ವಹಿಸಿಕೊಂಡಿದ್ದಾರೆ.
ಜು.೧೯ ರಂದು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ೨೦೧೯ನೇ ಸಾಲಿನ ಐಎಎಸ್ ಅಧಿಕಾರಿಯಾಗಿ ಆಕಾಶ ಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಮತ್ತೆ ಬದಲಾವಣೆ ಮಾಡಿ ಶಶಿಧರ ಕುರೇರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.