ಜಿಲ್ಲೆ

ಜಿಂಕೆ ಬೇಟೆಯಾಡಿದ್ದವನ ಬಂಧನ

ಹನೂರು: ತಾಲೂಕಿನ ಕಾವೇರಿ ವನ್ಯಜೀವಿ ವಿಭಾಗ ಕೌದಳ್ಳಿ ಶಾಖೆಯ ಅರಬಗೆರೆ ಗಸ್ತಿನ ಊತಬಾವಿ ಹಳ್ಳ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಜಿಂಕೆ ಬೇಟೆಯಾಡಿ ಮಾಂಸವನ್ನು ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.

ತಾಲೂಕಿನ ಹೊಸಳ್ಳಿ ಗ್ರಾಮದ ನಾಗರಾಜು (40) ಬಂಧಿತ ಆರೋಪಿ. ಈತ ತನ್ನ ಇಬ್ಬರು ಜತೆಗಾರರು ಹಾಗೂ ಸಾಕು ನಾಯಿಯೊಂದಿಗೆ ಊತಬಾವಿ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಜಿಂಕೆ ಬೇಟೆಯಾಡಿ ಮಾಂಸವನ್ನು ಬೇರ್ಪಡಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ನಾಗರಾಜು ಸಿಕ್ಕಿಬಿದ್ದರೆ ಮತ್ತಿಬ್ಬರು ಪರಾರಿಯಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.