ಜಿಲ್ಲೆ

ಜಿಎಸ್‌ಟಿ ಇಳಿಕೆ ಬಿಜೆಪಿ ಸಂಭ್ರಮಾಚರಣೆ

ಚಾಮರಾಜನಗರ: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ಸಮಾವೇಶಗೊಂಡ ಪಕ್ಷದ ಮುಖಂಡರು, ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಕೂಗಿ ಸಂಭ್ರಮಿಸಿದರು.

ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರವು ಜಿಎಸ್‌ಟಿ ಕಡಿಮೆಗೊಳಿಸುವ ಮೂಲಕ ರೈತರಿಗೆ, ವಿದ್ಯಾರ್ಥಿಗಳಿಗೆ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನೆರವಾಗಿದೆ ಎಂದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಪಕ್ಷದ ಮಾಜಿ ಅಧ್ಯಕ್ಷ ಆರ್.ಸುಂದರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ವೃಷಭೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಜಿಪಂ ಮಾಜಿ ಸದಸ್ಯ ಬಾಲರಾಜು, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಚಾಮುಲ್ ಮಾಜಿ ಅಧ್ಯಕ್ಷ ನಾಗೇಂದ್ರ, ಅರಕಲವಾಡಿ ನಾಗೇಂದ್ರ, ನಗರ ಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಮಹೇಶ್, ಬೇಡರಪುರ ಬಸವಣ್ಣ, ನಟರಾಜು, ವೃಷಭೇಂದ್ರ ಸ್ವಾಮಿ, ಅಗರ ರಾಜು, ಮುನೇಶ್, ಶಿವಣ್ಣ, ಎಸ್‌ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಯಸುಂದರ್, ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷ ಚಂದ್ರು, ಎಸ್‌ಸಿ ಮೋರ್ಚಾದ ಮೂಡಹಳ್ಳಿ ಮೂರ್ತಿ, ಕೊತ್ತಲವಾಡಿ ಮಾದಪ್ಪ, ಹರದನಹಳ್ಳಿ ರವಿ ಮತ್ತು ಇತರರು ಇದ್ದರು.