ಜಿಲ್ಲೆ

ಜಿಗುಪ್ಸೆಗೊಂಡು ವಿಷ ಸೇವಿಸಿದ್ದವ ಸಾವು

ಮುಳಬಾಗಿಲು:ಜೀವನದಲ್ಲಿ ಜಿಗುಪ್ಸೆಗೊಂಡು ನ.-13ರಂದು ಮನೆಯಲ್ಲೇ ವಿಷ ಸೇವನೆ ಮಾಡಿದ್ದ ಕೋಲಾರ ಮೂಲದ ಮಂಜುನಾಥ್​ (35) ಅವರು ಚಿಕಿತ್ಸೆ ನಂತರ ಚೇತರಿಸಿಕೊಂಡರೂ ಸಹ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಮಂಗಳವಾರ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತಾಲೂಕಿನ ನಂಗಲಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಂಜುನಾಥ್​ ಅವರನ್ನು ನ.13ರಂದು ಕೋಲಾರ ನಗರ ಟಮಕದ ಆರ್​.ಎಲ್​.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಕಳೆದ ಎರಡು ದಿನಗಳ ಹಿಂದೆ ಮನೆಗೆ ಬಂದಿದ್ದರು. ಮಂಗಳವಾರ ಮತ್ತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿ ಮೃತಪಟ್ಟಿದ್ದಾನೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ನಂಗಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.