ಚಿತ್ರದುರ್ಗ: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಪಂ ಅಧೀನಕ್ಕೆ ಒಳಪಡಿಸಿ ರಾಜ್ಯಸರ್ಕಾರ ಆದೇಶ ವಿರೋಧಿಸಿ ನ.23ರಂದು ಬೆಳಗ್ಗೆ 10ಕ್ಕೆ ನಗರದಲ್ಲಿ ಪ್ರತಿಭಟನೆ ನಡೆಸಲು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶಪ್ಪ ಹೇಳಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಂಘಟನೆ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಪಂ ಸಿಇಒ ಅಧೀನಕ್ಕೆ ಒಳಪಡಿಸಿರುವ ಸರ್ಕಾರದ ಕ್ರಮ ಅವೈಜ್ಞಾನಿಕ ಹಾಗೂ ಅಪ್ರಸ್ತು ತವಾಗಿದೆ.
ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಎಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮ ನವಿ ಸಲ್ಲಿಸಲಾಗುವುದು ಎಂದರು. ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಜಿ. ಎಸ್.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಕಾಂತರಾಜ್ ಹಾಗೂ ಪ.ಪೂ ಕಾಲೇಜುಗಳ ಬೋಧಕೇತರ ಸಂಘದ ಜಿಲ್ಲಾಧ್ಯಕ್ಷ ದುರುಗೇಶಪ್ಪ ಮತ್ತಿತರರು ಸಭೆಯಲ್ಲಿ ಇದ್ದರು.