ಜಿಲ್ಲೆ

ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಕಾಲ್ನಡಿಗೆ ಮೆರವಣಿಗೆ

ಹಾಸನ: ನಗರದ ಬಿ.ಎಂ. ರಸ್ತೆ ಬಳಿ ಇರುವ ಕಾಂಗ್ರೆಸ್ ಕಚೇರಿಯಿಂದ ನಗರದ ಎಂ.ಜಿ. ರಸ್ತೆವರೆಗೂ ಕಾಲ್ನಡೆಗೆ ಮೂಲಕ ಮೆರವಣಿಗೆ ಬಂದು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೆರಗು ನೀಡಿದರು.
ಇದೆ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಎಂದು ಕರೆಯುತ್ತೇವೆ. ಇವರು ನಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಗೆ ಆಗಮಿಸಿ ಕಾಂಗ್ರೆಸ್ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರನ್ನು ನೆನಪಿಸಿಕೊಳ್ಳುವ ಮೂಲಕ ಅಧಿವೇಶವನ್ನು ನೆನಪಿಸಿಕೊಳ್ಳುವಂತೆ ನಮ್ಮ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕರೆ ಕೊಟ್ಟಿದ್ದಾರೆ. ಕಾಯಾಧ್ಯಕ್ಷರಾದ ಚಂದ್ರಶೇಖರ್ ಕೂಡ ಕರೆ ನೀಡಿದ್ದು, ಹಾಸನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಲ್ನಡಿಗೆ ಮೂಲಕ ಎಂ.ಜಿ. ರಸ್ತೆವರೆಗೂ ಬಂದು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗಿದೆ ಎಂದರು.
ಕೆಪಿಸಿಸಿ ವೀಕ್ಷಕರಾದ ಶ್ರೀನಿವಾಸ್ ಮೂರ್ತಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಎಲ್ಲ ವರ್ಗದ ಜನರಿಗೆ ಕೊಟ್ಟು ಈಡೇರಿಸಿದೆ. ಗ್ರಾಮ ಸ್ವರಾಜ್ಯದ ಕನಸ್ಸನ್ನು ಕಾಂಗ್ರೆಸ್ ಪಕ್ಷ ಈಡೇರಿಸಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದರು.
ಕಾಲ್ನಡಿಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್, ಅಬ್ದೂಲ್ ಕಯ್ಯೂಮ್, ಶಶಿಧರ್, ಕೊಲ್ಲಳ್ಳಿ ಸಲೀಂ, ರಘು ದಾಸರಕೊಪ್ಪಲು ಸೇರಿದಂತೆ ಇತರರು ಉಪಸ್ಥಿತರಿದ್ದರು.