ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿ ರಚಿಸಲಾಗಿದ್ದು ಅಧ್ಯಕ್ಷರಾಗಿ ಆವರಗೆರೆಯ ವಕೀಲ ಎಸ್.ಪರಮೇಶ್ ನೇಮಕಗೊಂಡಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.
ಸಮಿತಿ ಉಪಾಧ್ಯಕ್ಷರಾಗಿ ಮಂಜಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ತಿಪ್ಪೇಶಪ್ಪ, ಕವಿತಾ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರಮೌಳಿ, ಮಂಗಳಮ್ಮ, ಖಜಾಂಚಿಯಾಗಿ ಅನಿಸ್ ಪಾಷಾ, ಸಹಕಾರ್ಯದರ್ಶಿಯಾಗಿ ಎ.ಅರುಣ್‌ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯ ಎ.ನಾಗರಾಜ್, ಪರಿಶಿಷ್ಟ ವರ್ಗ ಘಟಕ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥ್ ಇದ್ದರು.