ಜಿಲ್ಲೆ

ಜಿಲ್ಲಾ ಕಾರಾಗೃಹಕ್ಕೆ ಮಕ್ಕಳ ಹಕ್ಕುಗಳ ಆಯೋಗ ಅಧ್ಯಕ್ಷೆ ಜಯಶ್ರೀ ಭೇಟಿ

ಬೀದರ್: ನಗರದ ಜಿಲ್ಲಾ ಕಾರಾಗೃಹಕ್ಕೆ ಭಾನುವಾರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಅಧ್ಯಕ್ಷೆ ಜಯಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳೊಂದಿಗೆ ಚರ್ಚೆ ನಡೆಸಿ, ಜೀವನದಲ್ಲಿ ನಡೆದ ಅಹಿತಕರ ಘಟನೆಗಳನ್ನು ಮರೆತು ಆರೋಪದಿಂದ ಮುಕ್ತವಾದ ನಂತರ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು.

ಮಹಿಳೆಯರೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಅವರಲ್ಲಿ ಧೈರ್ಯ ತುಂಬಿದರು. ಬಳಿಕ ಆರು ವರ್ಷದ ಒಳಗಿನ ಮಗುವಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಕಲ್ಪಿಸುವಂತೆ ಸ್ಳಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಕಾರಾಗೃರದಲ್ಲಿ ಊಟ ತಯಾರು ಮಾಡುವುದು, ಗ್ರಂಥಾಲಯ, ಪ್ರತ್ಯೇಕ ಸೆಲ್​ಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು.

ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣಬಸಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಗೌರಿಶಂಕರ ಪರತಾಪುರೆ, ಪ್ರಶಾಂತ ಬಿರಾದಾರ ಇತರರಿದ್ದರು