ಹಾಸನ: ಜಿಲ್ಲಾ ನೇಕಾರ ಕುರುಹಿನಶೆಟ್ಟಿ ಮಹಿಳಾ ಸಂಘ ಮತ್ತು ಜಿಲ್ಲಾ ನೇಕಾರ ಸಮುದಾಯಗಳ ಮಹಿಳಾ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ರವೀಂದ್ರ ನಗರದಲ್ಲಿ ಜು.20ರಂದು ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕ್ರೀಡಾ ಚಟುವಟಿಕೆ ಹಾಗೂ ಜು.21ರಂದು ವಾರ್ಷಿಕೋತ್ಸವ ಸಮಾರಂಭ, ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಸಂಘದ ಅಧ್ಯಕ್ಷೆ ಪೇಮಮ್ಮ ತಿಳಿಸಿದರು.
ಜು.20 ಶನಿವಾರಶ್ರೀ ಸತ್ಯನಾರಾಯಣ ಪೂಜೆ ನಂತರ ಕ್ರೀಡಾಸ್ಪರ್ಧೆ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಸಂಘದ 8ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ನಂತರ ಸಭಾ ಕಾರ್ಯಕ್ರಮವನ್ನು ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಕುರುಹಿನ ಶೆಟ್ಟಿ ಕೇಂದ್ರ ಸಂಘದ ಅಧ್ಯಕ್ಷ ಕಾಮಮೂರ್ತಿ ಅಂಬಾದಾಸ್, ಅಖಿಲ ಭಾರತ ಕುರುಹಿನಶೆಟ್ಟಿ ಸಂಘದ ಅಧ್ಯಕ್ಷೆ ಡಾ. ಜಯಲಕ್ಷ್ಮಿ, ಮಾಜಿ ಅಧ್ಯಕ್ಷೆ ದೇವಿಕಾ ಭೂಷಣ್, ಮಹಿಳಾ ಒಕ್ಕೂಟದ ಅಧ್ಯಕ್ಷೆ ನಾಗವೇಣಿ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ರಾಜ್ಯ ನೇಕಾರರ ಒಕ್ಕೂಟದ ಅಧ್ಯಕ್ಷ ಸೋಮೇಶೇಖರ್ ಇತರರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ನೇಕಾರ ಕುರುಹಿನಶೆಟ್ಟಿ ಮಹಿಳಾ ಸಂಘದ ಖಜಾಂಚಿ ಇಂದ್ರ ಮಂಜುನಾಥ್, ಸ್ವ-ಸಹಾಯ ಸಂಘದ ಅಧ್ಯಕ್ಷ ಲಕ್ಷ್ಮಿಪ್ರಸಾದ್, ಪ್ರಧಾನ ಕಾರ್ಯದರ್ಶಿ ಸುನೀತ ಮನೋಜ್ ಕುಮಾರ್ ಇದ್ದರು.