ಜಿಲ್ಲೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

Dharwada - Vikram Nadiger

ಧಾರವಾಡ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ 2023-24ನೇ ಸಾಲಿನಲ್ಲಿ ತಾಲೂಕು ಮಟ್ಟದ ಮೇಲಾಟಗಳ ಸ್ಪರ್ಧೆಯಲ್ಲಿ ಇಲ್ಲಿನ ಮಾಳಮಡ್ಡಿ ಕೆ.ಇ.ಬೋರ್ಡ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೆ.
ತ್ರಿವಿಧ ಜಿಗಿತ ಮತ್ತು ಉದ್ದ ಜಿಗಿತದಲ್ಲಿ ಸುಮಿತ ಭೂಮಣ್ಣನವರ್ ಪ್ರಥಮ ಸ್ಥಾನ, ಎತ್ತರ ಜಿಗಿತದಲ್ಲಿ ಮುತ್ತುರಾಜ ಪಟ್ಟಣಶೆಟ್ಟಿ ದ್ವಿತೀಯ ಸ್ಥಾನ, ಮಂಜುನಾಥ ಎಂ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.