ಚಿತ್ರದುರ್ಗ: ವಿದ್ಯಾವಿಕಾಸ ವಿದ್ಯಾಸಂಸ್ಥೆ ಐಸಿಎಸ್‌ಸಿ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ, ಭರತನಾಟ್ಯ ಕಲಾವಿದೆ ಶಮಾಭಾಗ್ವತ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಚಿತ್ರದುರ್ಗ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ. ಚೈತ್ರಾ ಅವರು ಪ್ರಶಸ್ತಿಪತ್ರ, ನೆನಪಿನ ಕಾಣಿಕೆ, ನಗದು ಬಹುಮಾನ ಪ್ರಧಾನ ಮಾಡಿ ಗೌರವಿಸಿದರು. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆ ಕಾರ್ಯದರ್ಶಿ ಬಿ. ವಿಜಯ್‌ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ, ನಿರ್ದೇಶಕಿ ಪಿ.ಸಿ. ಸುನಿತಾ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.