ಗುಡ್ಡೆಹೊಸೂರು ಹಿತರಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಮೂರನೆ ವರ್ಷದ ಜಿಲ್ಲಾಮಟ್ಟದ ವಾಲಿಬಾಲ್, ಹಗ್ಗಜಗ್ಗಾಟ ಮತ್ತು ಥ್ರೋಬಾಲ್ ಪಂದ್ಯಾಟಕ್ಕೆ ಅಂತಾರಾಷ್ಟ್ರೀಯ ಸೆಸ್ಟೋಬಾಲ್ ಕ್ರೀಡಾಪಟು ನಂದಿನಿ ಚಾಲನೆ ನೀಡಿದರು.  
ಜಿಲ್ಲೆ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಕುಶಾಲನಗರ: ಗುಡ್ಡೆಹೊಸೂರು ಹಿತರಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಮೂರನೇ ವರ್ಷದ ಜಿಲ್ಲಾ ಮಟ್ಟದ ವಾಲಿಬಾಲ್, ಹಗ್ಗಜಗ್ಗಾಟ ಮತ್ತು ಥ್ರೋಬಾಲ್ ಪಂದ್ಯಾಟಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಕ್ರೀಡಾಕೂಟಕ್ಕೆ ಅಂತಾರಾಷ್ಟ್ರೀಯ ಸೆಸ್ಟೋಬಾಲ್ ಕ್ರೀಡಾಪಟು ನಂದಿನಿ ಚಾಲನೆ ನೀಡಿದರು. ಬೊಳ್ಳೂರಿನ ಶ್ರೀ ಬಸವೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ಮೈದಾನಕ್ಕೆ ತರಲಾಯಿತು. ಹಿತರಕ್ಷಣ ಸಮಿತಿ ಅಧ್ಯಕ್ಷ ಶಶಿ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದಾರೆ.

ಉದ್ಯಮಿ ಸಚಿನ್, ಗ್ರಾ.ಪಂ.ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋದಾ, ಸದಸ್ಯರಾದ ಬಿ.ಎಂ.ಪ್ರದೀಪ್, ನಾರಾಯಣ, ಗಂಗಮ್ಮ, ಕೆ.ಆರ್.ನಿತ್ಯಾನಂದ, ಮುಖ್ಯಶಿಕ್ಷಕ ಸಣ್ಣಸ್ವಾಮಿ, ಸಮಿತಿಯ ಕಾರ್ಯದರ್ಶಿ ಅಭಿಜಿತ್ ಮತ್ತು ಸಮಿತಿಯ ಸದಸ್ಯರು, ಗುಡ್ಡೆಹೊಸೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ಯಾಂ ತಮ್ಮಯ್ಯ ಹಾಜರಿದ್ದರು.