ಜಿಲ್ಲೆ

ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಯಶಸ್ವಿ ಆಯೋಜನೆ

Uttara Kannada - Subash Hegde

ಕಾರವಾರ: ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ. ಓದಿನ ಜತೆಗೆ ವಿದ್ಯಾರ್ಥಿಗಳು ಆಟೊಟಗಳ ಬಗ್ಗೆಯೂ ಗಮನ ಕೊಡಬೇಕು ಎಂದು ಎಂಎಲ್‌ಸಿ ಗಣಪತಿ ಉಳ್ವೇಕರ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯಿಂದ ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗೆದ್ದು ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು. ನಗರಸಭೆ ಸದಸ್ಯ ಪ್ರೇಮಾನಂದ ಗುನಗಾ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಲತಾ ನಾಯಕ ಸ್ವಾಗತಿಸಿದರು. ಬಿಇಒ ಚಂದ್ರಹಾಸ ರಾಯ್ಕರ್ ವಂದಿಸಿದರು. ಹಿಂದು ಪ್ರೌಢಶಾಲೆಯ ವನಿತಾ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಽಕಾರಿ ಶಾಂತರಾಮ ನಾಯ್ಕ, ಜಿಲ್ಲಾ ಯೋಜನಾ ಉಪ ನಿರ್ದೇಶಕ ನಾಗರಾಜ ಗೌಡ, ಕಾರವಾರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಪಿ.ಗೌಡ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಸುಧಾಕರ್ ಗುನಗಿ, ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಜೈ ರಂಗನಾಥ ಬಿ.ಎಸ್.ಉಪಸ್ಥಿತರಿದ್ದರು.