ಜಿಲ್ಲೆ

ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರ 22 ರಿಂದ

ಬೀದರ್: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ಇಲ್ಲಿಯ ಬಾಲ ಭವನದಲ್ಲಿ ಏಪ್ರಿಲ್ 22 ರಿಂದ ಮೇ 7 ರ ವರೆಗೆ ಜಿಲ್ಲಾ ಮಟ್ಟದ ಮಕ್ಕಳ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.
5 ವರ್ಷದಿಂದ 16 ವರ್ಷದ ಒಳಗಿನ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳಬಹುದು ಎಂದು ಜಿಲ್ಲಾ ಬಾಲ ಭವನ ಸಮಿತಿಯ ಸಂಯೋಜಕ ಸೂರ್ಯಕಾಂತ ಮೋರೆ ತಿಳಿಸಿದ್ದಾರೆ.
ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ಕರ ಕುಶಲ ಕಲೆ, ಸಮೂಹ ಗೀತೆ, ಸಮೂಹ ನೃತ್ಯ, ಜೇಡಿ ಮಣ್ಣಿನ ಕಲೆ, ಕರಾಟೆ, ಯೋಗ, ಮೆಹಂದಿ ಬಿಡಿಸುವಿಕೆ ಮೊದಲಾದ  ಕಲೆಗಳ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಆಸಕ್ತ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಭವನದಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬಾಲ ಭವನಕ್ಕೆ ಭೇಟಿ ನೀಡಬಹುದು. ಇಲ್ಲವೇ ಮೊಬೈಲ್ ಸಂಖ್ಯೆ 9242991778  ಅಥವಾ 9113906525ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.