ಜಿಲ್ಲೆ

ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ: ರಾಜ್ಯ ಸರ್ಕಾರದ ಜಿಲ್ಲಾ ವಾಹನ ಚಾಲಕರ ಸಂಘದ ಕ್ಯಾಲೆಂಡರ್ ಅನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಗುರುವಾರ ಬಿಡುಗಡೆ ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಹೊಸವರ್ಷದ ಶುಭಾಶಯಗಳನ್ನು ಕೋರಿದರು. ಜಿಲ್ಲಾ ವಾಹನ ಚಾಲಕರ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಗೌರವಾಧ್ಯಕ್ಷ ಬಿ.ಪಿ ಪ್ರಕಾಶ್, ಉಪಾಧ್ಯಕ್ಷ ಎಸ್.ಶಶಿಕುಮಾರ್, ಕಾರ್ಯದರ್ಶಿ ಎಂ.ಎಸ್ ಪ್ರಭುಸ್ವಾಮಿ ಹಾಗೂ ಸಂಘದ ಪಧಾದಿಕಾರಿಗಳು, ಜಿಲ್ಲಾ ವಾಹನ ಚಾಲಕರು ಉಪಸ್ಥಿತರಿದ್ದರು.