ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದ ರಾಷ್ಟçಪಿತ ನೆನಪಿನಂಗಳದಲ್ಲಿ ಗಾಂಧಿ ಜಯಂತಿ ಅಂಗವಾಗಿ ಗಣ್ಯರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎಚ್.ಡಿ.ತಮ್ಮಯ್ಯ, ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ, ಮೀನಾ ನಾಗರಾಜ್, ಎಚ್.ಎಸ್.ಕೀರ್ತನಾ, ವಿಕ್ರಮ ಅಮಟೆ, ಬಿ.ಎಚ್.ಹರೀಶ್, ಕೆ.ಟಿ.ರಾಧಾಕೃಷ್ಣ ಮತ್ತಿತರರಿದ್ದರು. 
ಜಿಲ್ಲೆ

ಜಿಲ್ಲಾಡಳಿತದಿಂದ ಸರ್ವಧರ್ಮ ಗ್ರಂಥಗಳ ಪಠಣ

ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಅವರ ೧೫೬ನೇ ಜನ್ಮ ದಿನವನ್ನು ಜಿಲ್ಲಾಧಿಕಾರಿ ಕಚೇರಿ ಒಳಾವರಣದ ರಾಷ್ಟçಪಿತ ನೆನಪಿನಂಗಳದಲ್ಲಿ ಗುರುವಾರ ಆಚರಿಸಲಾಯಿತು. ಈ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿದರು. ಗಾಂಧಿ ಜಯಂತಿ ಅಂಗವಾಗಿ ಸರ್ವಧರ್ಮ ಸಮನ್ವಯ ಸಾರದ ಹಿನ್ನೆಲೆಯಲ್ಲಿ ನಾಗಶ್ರೀ ತ್ಯಾಗರಾಜ್ ಭಗವದ್ಗೀತೆ, ಔರಂಗಜೇಬ್ ಪಾಷಾ ಕುರಾನ್ ಹಾಗೂ ಫಾದರ್ ಬಿಷಪ್ ಥಾಮಸ್ ಅಂತೋಣಿ ಬೈಬಲ್ ಪಠಣ ಮಾಡಿದ್ದು ವಿಶೇಷವಾಗಿತ್ತು.

ಗಾಯಕರಾದ ಸುರೇಂದ್ರ ನಾಯಕ್ ಹಾಗೂ ಲಾಲಿತ್ಯ ಅಣ್ವೇಕರ್ ತಂಡದವರು ಗಾಂಧೀಜಿಯವರಿಗೆ ಪ್ರಿಯವಾದ `ರಘುಪತಿ ರಾಘವ ರಾಜಾರಾಂ ಹಾಗೂ ಸಿದ್ಧ ಬುದ್ಧ ನೀ ಸ್ಕಂದ ವಿನಾಯಕ ಭಜನೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಇಡೀ ವಿಶ್ವದಲ್ಲಿ ಅಹಿಂಸೆಯ ಹೋರಾಟದಿಂದ ಸ್ವಾತಂತ್ರವನ್ನು ಪಡೆಯಬಹುದು ಎಂಬುದನ್ನು ತೋರಿಸಿಕೊಟ್ಟ ದೇಶದ ಮಹಾನ್ ನಾಯಕ ಮಹಾತ್ಮಾ ಗಾಂಧೀಜಿ. ಅಹಿಂಸಾ ತತ್ವದಡಿಯಲ್ಲಿ ಜನರನ್ನು ಒಗ್ಗೂಡಿಸಿ ಹೋರಾಟ ನಡೆಸಿದ ಫಲವಾಗಿ ನಮಗೆ ೧೯೪೭ರ ಆಗಸ್ಟ್ ೧೫ರಂದು ಸ್ವಾತಂತ್ರö್ಯಲಭಿಸಿತು. ಈ ಹೋರಾಟದ ಸಂದರ್ಭದಲ್ಲಿ ಇಂಡಿಯನ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆರು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಗಾಂಧೀಜಿ, ಜವಾಹರ್ ಲಾಲ್ ನೆಹರು, ಸುಭಾಶ್ಚಂದ್ರ ಬೋಸ್, ಸರ್ದಾರ್ ವಲ್ಲಭ ಭಾಯಿ ಪಟೇಲ್, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಹೀಗೆ ಹಲವರನ್ನು ಒಗ್ಗೂಡಿಸಿಕೊಂಡು ಹೋರಾಟದಲ್ಲಿ ಧುಮುಕಿದ್ದರು. ಅಂಥವರ ಶ್ರಮದಿಂದ ಇಂದು ನಾವೆಲ್ಲ ನೆಮ್ಮದಿಯಿಂದ ಜೀವಿಸುತ್ತಿz್ದೆÃವೆ ಎಂದರು.

ಸ್ವದೇಶಿ ಹತ್ತಿಯಿಂದ ತಯಾರಿಸಿದ ಉಡುಪುಗಳನ್ನು ಧರಿಸಿ ಇಡೀ ಪ್ರಪಂಚಕ್ಕೆ ಗಾಂಧೀಜಿ ಮಾದರಿಯಾಗಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ನೆನಪು ಜಯಂತಿಗೆ ಸೀಮಿತವಾಗಬಾರದು. ಅವರ ವಿಚಾರಧಾರೆಗಳನ್ನು ನಮ್ಮ ಯುವಪೀಳಿಗೆ ಅನುಸರಿಸುವಂತಾಗಬೇಕು ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರ ೧೫೬ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತಿçÃಯವರ ೧೨೧ನೇ ಜಯಂತಿ ಕಾರ್ಯಕ್ರಮದ ವಿಶೇಷ ಇಂದು. ದೇಶಕ್ಕೆ ಮಾತ್ರವಲ್ಲ, ಅಂತಾರಾಷ್ಟಿçÃಯ ಮಟ್ಟಕ್ಕೂ ಗಾಂಧೀಜಿ ಅವರ ಕೊಡುಗೆ ಅಪಾರವಾಗಿದ್ದು, ಸ್ಮರಣೀಯವಾಗಿದೆ. ಯುವಪೀಳಿಗೆ ಗಾಂಧೀಜಿ ಅವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು. ಈ ನಾಡನ್ನು ಕಟ್ಟುವ ಯುವಜನತೆಗೆ ಬೆಳಕಾಗುವ ಸ್ಫೂರ್ತಿದಾಯಕ ವ್ಯಕ್ತಿತ್ವವಿದ್ದರೆ ಅದು ಗಾಂಧೀಜಿಯವರದು. ಲಾಲ್ ಬಹದ್ದೂರ್ ಶಾಸ್ತಿç ಅವರು ಕೂಡ ಪ್ರಾಮಾಣಿಕವಾದ ವ್ಯಕ್ತಿತ್ವ ಹೊಂದಿ ಈ ದೇಶದ ಪ್ರಧಾನ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಮಹಾತ್ಮಾ ಗಾಂಧೀಜಿ ಭಾರತೀಯ ಮೌಲ್ಯಗಳ ಪ್ರತೀಕ. ಭಾರತ ಜಗತ್ತಿಗೆ ಅಹಿಂಸೆ, ಶಾಂತಿಯನ್ನು, `ಸರ್ವೇ ಜನ ಸುಖಿನೋ ಭವಂತು ಎನ್ನುವ ಮಂತ್ರವನ್ನು ಕೊಟ್ಟಿರುವುದು ಭಾರತ. ಆ ಭಾರತೀಯತೆಯ ಪ್ರತೀಕ ಗಾಂಧೀಜಿ. ಸ್ವಾತಂತ್ರö್ಯ ಹೋರಾಟದಲ್ಲಿ ಜನಸಾಮಾನ್ಯರಿಗೆ ಹೋರಾಟದ ಕೆಚ್ಚನ್ನು ಹಬ್ಬಿಸುವುದರೊಳಗೆ ಗಾಂಧೀಜಿಯವರ ಪಾತ್ರ ಬಹಳ ದೊಡ್ಡದು. ಸರಳವಾದ ವಿಷಯಗಳನ್ನೆತ್ತಿಕೊಂಡ ಸ್ವಾತಂತ್ರö್ಯ ಹೋರಾಟವನ್ನು ಜನಸಾಮಾನ್ಯರ ಹೋರಾಟವನ್ನಾಗಿ ಮಾಡಿದರು. ಖಾದಿ, ಚರಕ, ಉಪ್ಪಿನ ಸತ್ಯಾಗ್ರಹದ ಮೂಲಕ ಹೋರಾಟವನ್ನು ಜನಮಾನಸಕ್ಕೆ ಮುಟ್ಟಿಸಿ ಜನರಲ್ಲಿ ಸ್ವಾತಂತ್ರö್ಯಕ್ಕಾಗಿ ನಾವೂ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎನ್ನುವ ಸಂಕಲ್ಪಶಕ್ತಿಯನ್ನು ಪ್ರೇರೇಪಿಸಿದ್ದು ಗಾಂಧೀಜಿ ಎಂದರು.

`ವಜ್ರಾದಪಿ ಕಠೋರಾಣಿ ಮೃದೂನಿ ಕುಸುಮಾದಪಿ (ವಜ್ರದಷ್ಟು ಕಠಿಣವಾದ, ಆದರೆ ಹೂವಿನಷ್ಟು ಮೃದುವಾದ) ಎಂಬAತೆ ಬಾಳಿ ಬದುಕಿದವರು ಲಾಲ್ ಬಹದ್ದೂರ್ ಶಾಸ್ತಿçÃ. ನೋಡಲು ದೃಢಕಾಯರಲ್ಲದಿದ್ದರೂ ಆತ್ಮವಿಶ್ವಾಸ, ಮಾನಸಿಕ ಸಂಕಲ್ಪಕ್ಕೆ ಅವರಿಗೆ ಸರಿಸಾಟಿಯಾಗಿ ಇದ್ದವರು ಇನ್ನೊಬ್ಬರಿಲ್ಲ. `ಜೈ ಜವಾನ್, ಜೈಕಿಸಾನ್ ಎನ್ನುವ ಮಂತ್ರವನ್ನು ಕೊಟ್ಟವರು ಲಾಲ್ ಬಹದ್ದೂರ್ ಶಾಸ್ತಿç. ಶಾಸ್ತಿçಯವರ ನೇತೃತ್ವದಲ್ಲಿ ೧೯೬೫ರಲ್ಲಿ ಪಾಕ್ ವಿರುದ್ಧದ ಯುದ್ಧದಲ್ಲಿ ಭಾರತ ಸಾಧಿಸಿದ ಜಯ ಐತಿಹಾಸಿಕ ವಿಜಯ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷೆ ಲಲಿತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ ಸೇರಿದರಂತೆ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರರಿದ್ದರು.

ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾ ಗಾಂಧೀಜಿ ೧೫೬ನೇ ಜಯಂತಿ ಅಂಗವಾಗಿ ಪದವಿ-ಸ್ನಾತಕೋತ್ತರ ಪದವಿ, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.