ಬಳ್ಳಾರಿ ; ಮತದಾನ ದಿನದಂದು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 05 ರ ಸಂಜೆ 06 ಗಂಟೆಯಿಂದ ಮೇ 08 ರ ಸಂಜೆ 06 ಗಂಟೆಯವರೆಗೆ ಜಿಲ್ಲಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.
ತದಾರರಿಗೆ ವಿವಿಧ ಆಸೆ-ಆಮಿಷಗಳಿಗೆ ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ವರ್ತಿಸಲು ಪ್ರೇರೆಪಿಸುವುದು, ಮತಗಟ್ಟೆ ಕೇಂದ್ರಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆ ತರುವುದು, ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆಗಳಿದ್ದು, ಇದನ್ನು ತಡೆಗಟ್ಟುವುದು ಹಾಗೂ ಮತದಾನ ಪಾವಿತ್ರ್ಯತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.