ಜಿಲ್ಲೆ

ಜಿಲ್ಲಾಧ್ಯಕ್ಷರಾಗಿ ನಿರಂಜನ್ ಕುಮಾರ್ ಮರುನೇಮಕ

ಚಾಮರಾಜನಗರ: ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಪುನಾರಾಯ್ಕೆಯಾಗಿದ್ದು, ಇಂದು 2ನೇ ಬಾರಿಗೆ ಅಧಿಕಾರ ಸ್ವೀಕರಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣಾಧಿಕಾರಿ ಭಾರತೀಶ್ ಅವರಿಂದ ಅಧಿಕಾರ ಸ್ವೀಕರಿ ಮಾತನಾಡಿ, ಪಕ್ಷದ ವರಿಷ್ಠರು 2ನೇ ಬಾರಿಗೆ ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜಿಲ್ಲೆಯಲ್ಲಿ ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸಿ ಮುಂಬರುವ ಜಿ.ಪಂ.ತಾ.ಪಂ ಹಾಗೂ ಸ್ಥಳೀಯ ಸಂಸ್ಥೆ ಹಾಗೂ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಶ್ರಮಿಸಲಾಗುವುದು ಎಂದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ. ಎಂ.ರಾಮಚಂದ್ರ,  ಬಿಜೆಪಿ ನಿಕಟಪೂರ್ವ  ಅಧ್ಯಕ್ಷ ನಾರಾಯಣಪ್ರಸಾದ್,  ರಾಜ್ಯ ಸಂಚಾಲಕ ಫಣೀಶ್, ಸಹ ಚುನಾವಣಾಧಿಕಾರಿಗಳಾದ ಅರಕಲವಾಡಿ ನಾಗೇಂದ್ರ, ನೂರೊಂದು ಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡುಪ್ರಕಾಶ್, ಹೊನ್ನೂರು ಮಹದೇವಸ್ವಾಮಿ,ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್ , ಪ್ರಕೋಷ್ಠ ಸಂಚಾಲಕ ಕಿಲ್ಲಗೆರೆ ಬಸವರಾಜು, ಕೋಡೆಸೋಗೆ ಶಿವಪ್ಪ, ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತ, ನಗರಮಂಡಲ ಅಧ್ಯಕ್ಷ ಶಿವರಾಜ್, ಜಿಲ್ಲಾ ಉಪಾಧ್ಯಕ್ಷ ಬುಲೆಟ್ ಚಂದ್ರು  ಇತರರು ಹಾಜರಿದ್ದರು.