ಬಳ್ಳಾರಿ : ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪಂಗಡ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ 5 ತಾಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದ್ದಾರೆ.2024-25 ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4000 ಕೋಟಿ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗಿದೆ ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.