ಜಿಲ್ಲೆ

ಜಿಲ್ಲೆಯ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಿ

ಶಿರಸಿ: ಶಿರಸಿ- ಸಿದ್ದಾಪುರ ಆಸ್ಪತ್ರೆಗಳ ಸುಧಾರಣೆ ಹಾಗೂ ಅಭಿವೃದ್ಧಿ ಕುರಿತಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ

ಬೆಂಗಳೂರಿನ ಸಭಾಧ್ಯಕ್ಷರ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಶಿರಸಿ- ಸಿದ್ದಾಪುರ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಮೂಲಸೌಕರ್ಯ, ತಜ್ಞ ವೈದ್ಯರು, ಕಟ್ಟಡ, ಯಂತ್ರೋಪಕರಣ, ವೈದ್ಯರು ಹಾಗೂ ಸಿಬ್ಬಂದಿ ಕುರಿತಂತೆ ರ್ಚಚಿಸಿದರು. ಶಿರಸಿಯ ಹೊಸ ಹೆರಿಗೆ ಆಸ್ಪತ್ರೆ ಕಟ್ಟಡವನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಒಂದು ವಾರದೊಳಗೆ ಎರಡೂ ಆಸ್ಪತ್ರೆಗಳ ಪ್ರತ್ಯೇಕ ಸಭೆ ನಡೆಸಿ ಅಗತ್ಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಗ್ರಾಮೀಣ ಸಂಚಾರಿ ಆಸ್ಪತ್ರೆಯ ಸಮಸ್ಯೆಗಳನ್ನು ಪರಿಹರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ವಿಧಾನಸಭಾಧ್ಯಕ್ಷ ಕಾಗೇರಿ ಸೂಚಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು ಶಿರಸಿ- ಸಿದ್ದಾಪುರ ಆಸ್ಪತ್ರೆಗೆ ಸಂಬಂಧಿಸಿದ ಅಗತ್ಯ ಪ್ರಸ್ತಾವನೆಗಳನ್ನು ಶೀಘ್ರ ತರಿಸಿಕೊಂಡು ಇಲಾಖೆಯ ವತಿಯಿಂದ ಕೂಡಲೇ ಅನುಮೋದನೆ ನೀಡಲು ಘಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ ಪಾಂಡೆ, ನಿರ್ದೇಶಕ ಓಂಪ್ರಕಾಶ ಪಾಟೀಲ, ಮುಖ್ಯ ಆಡಳಿತಾಧಿಕಾರಿ ಕಾತ್ಯಾಯಿನಿ ದೇವಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಆರ್. ಶ್ರೀನಿವಾಸ, ಮುಖ್ಯ ಇಂಜಿನಿಯರ್ ಎಂ. ಗಣೇಶ, ಉ.ಕ. ಜಿಲ್ಲೆಯ ಡಿಎಚ್​ಒ ಅಶೋಕ ಕುಮಾರ ಉಪಸ್ಥಿತರಿದ್ದರು.