ಚಿಕ್ಕಮಗಳೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡುವುದಾಗಿ ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಭರವಸೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳ ಕುರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ ಅವರು, ತಮ್ಮ ತಂದೆಯವರಾದ ಬೇಗಾನೆ ರಾಮಯ್ಯ ಅವರು ಶಾಸಕರಾಗಿ, ಸಚಿವರಾಗಿ ಮಲೆನಾಡಿನ ಸಮಸ್ಯೆಗಳನ್ನು ಬಗೆಹರಿಸಿದ ರೀತಿಯಲ್ಲಿಯೇ ತಾವು ಸಹ ಉತ್ತಮವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಈ ಹಿಂದೆ ತಾವು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದು, ವಿಧಾನ ಪರಿಷತ್ ಸದಸ್ಯೆ ಸ್ಥಾನಕ್ಕೆ ನ್ಯಾಯ ಒದಗಿಸುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿz್ದೆÃನೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಆ ಸ್ಥಾನವನ್ನು ನೀಡುವಂತೆ ಮನವಿ ಮಾಡಿz್ದÉÃನೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಶಕ್ತಿ ಮೀರಿ ಶ್ರಮವಹಿಸುತ್ತೇನೆ. ಪಕ್ಷವನ್ನು ಬೂತ್ ಮಟ್ಟದಿಂದ ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕಾರ್ಯ ನಿರ್ವಹಿಸಬೇಕು. ಪಕ್ಷದ ಕಾರ್ಯಕರ್ತರನ್ನು ಗುರುತಿಸುವ ಜೊತೆಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಬೇಗಾನೆ ರಾಮಯ್ಯ ಅವರು ಶಾಸಕರಾಗಿ, ಸಚಿವರಾಗಿ ಮಾಡಿದ ಜನಪರ ಕೆಲಸಗಳು ಜನಾನುರಾಗಿಯಾಗಿದ್ದು, ಅಚ್ಚಳಿಯದೇ ಜನರ ಮನಸ್ಸಿನಲ್ಲಿ ಉಳಿದಿವೆ. ಅವರ ನಂತರದಲ್ಲಿ ಅವರ ಮಗಳು ಡಾ.ಆರತಿ ಕೃಷ್ಣ ಅವರು ಅದೇ ರೀತಿಯ ಜನಪರ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಡಾ.ಆರತಿ ಕೃಷ್ಣ ಅವರು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾಗಿ ಬಹಳಷ್ಟು ಉತ್ತಮವಾದ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ, ವಿದೇಶದಲ್ಲಿ ಸಮಸ್ಯೆಗೊಳಗಾದ ಭಾರತೀಯರಿಗೆ ಸ್ಪಂದಿಸುವ ಕೆಲಸವನ್ನು ಬಹಳ ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರೂ ಆದ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ, ಬೇಗಾನೆ ರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಉತ್ತಮವಾಗಿ ಮಾಡಿದ್ದಾರೆ. ಅವರ ಹಾದಿಯಲ್ಲಿಯೇ ಡಾ.ಆರತಿ ಕೃಷ್ಣ ಅವರು ಉತ್ತಮ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿದರು.
ನೂತನ ವಿಧಾನ ಪರಿಷತ್ ಸದಸ್ಯರಾದ ಡಾ.ಆರತಿ ಕೃಷ್ಣ ಅವರನ್ನು ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಮಹಿಳಾ ಘಟಕ ಸೇರಿದಂತೆ ವಿವಿಧ ಘಟಕಗಳ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಬನಾ ಪರ್ವಿನ್, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ, ಮುಖಂಡರಾದ ಕೆ.ಮಹಮದ್, ಅತೀಖ್ ಖೈಸರ್, ಮಹಮದ್ ಅಕ್ಬರ್, ಎಚ್.ಡಿ.ರಾಮಚಂದ್ರ, ಸೈಯದ್ ಹನೀಫ್ ಮತ್ತಿತರರಿದ್ದರು.