ಜಿಲ್ಲೆ

ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥ ಸಂಚಾರ

 ಹಾಸನ : ಜಿಲ್ಲೆಗೆ ನ.12 ರಂದು ಆಗಮಿಸುವ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ ಜಿಲ್ಲೆಯಲ್ಲಿ ಸಂಚರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು ನ.12ರಿಂದ 14 ವರೆಗೆ ಜಿಲ್ಲೆಯಲ್ಲಿ ಸಂಚರಿಸುವ ಕುರಿತು ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ.12 ರಂದು ಜಿಲ್ಲೆಗೆ ಆಗಮಿಸುವ ರಥವು ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕಿನಲ್ಲಿ, ನ.13 ರಂದು ಚನ್ನರಾಯಪಟ್ಟಣ, ಹಾಸನ ಹಾಗೂ ಆಲೂರು ತಾಲೂಕಿನಲ್ಲಿ, ನ.14 ರಂದು ಸಕಲೆಶಪುರ, ಬೇಲೂರು ಹಾಗೂ ಅರಸೀಕೆರೆ ತಾಲೂಕಿನಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ.ಮಲ್ಲೇಶ್‌ಗೌಡ, ಮಾಜಿ ಅಧ್ಯಕ್ಷ ಮದನ್ ಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಕೃಷ್ಣ ಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.