ಜಿಲ್ಲೆ

ಜಿಲ್ಲೆಯಲ್ಲಿ ಕರೊನಾ ಕೊಂಚ ಇಳಿಮುಖ

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ದಾಖಲೆ ಪ್ರಮಾಣದಲ್ಲಿ 300 ಜನರಿಗೆ ಕರೊನಾ ಸೋಂಕು ತಗುಲಿದ್ದರೆ, ಸೋಮವಾರ 57 ಜನರಿಗೆ ಮಾತ್ರ ಪಾಸಿಟಿವ್ ದೃಢಪಟ್ಟಿದ್ದು, ಸಾರ್ವಜನಿಕರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ಸೋಮಾರದ ಪ್ರಕರಣದಲ್ಲಿ ಲೋಕೋಪಯೋಗಿ ಇಂಜಿನಿಯರ್, ಆರೋಗ್ಯ ಇಲಾಖೆ ಹಾಗೂ ಪುರಸಭೆ ನೌಕರರು ಸೇರಿದ್ದಾರೆ. 276 ಜನರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ತಿಳಿಸಿದ್ದಾರೆ.

ಈವರೆಗೆ 5,513 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 3,951 ಜನರು ಸೋಂಕಿನಿಂದ ಗುಣವಾಗಿದ್ದಾರೆ. 119 ಜನರು ಕೋವಿಡ್​ನಿಂದ ಮೃತಪಟ್ಟಿದ್ದಾರೆ. 1,443 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 1,023 ಸೋಂಕಿತರು ಹೋಂ ಐಸೋಲೇಷನ್​ನಲ್ಲಿ ಹಾಗೂ 425 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್​ಹೆಲ್ತ್ ಸೆಂಟರ್, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ತಾಲೂಕುವಾರು ವಿವರ: ಹಾವೇರಿ ತಾಲೂಕು 23, ರಾಣೆಬೆನ್ನೂರ 11, ಶಿಗ್ಗಾಂವಿ 9, ಬ್ಯಾಡಗಿ 6, ಹಿರೇಕೆರೂರ 5, ಹಾನಗಲ್ಲ 2 ಹಾಗೂ ಇತರೆ ಬಳ್ಳಾರಿ ಜಿಲ್ಲೆಯ ಒಬ್ಬರಿಗೆ ಸೋಮವಾರ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣವಾಗಿ ಸೋಮವಾರ ಹಾವೇರಿ ತಾಲೂಕಿನ 110, ರಾಣೆಬೆನ್ನೂರ 46, ಹಿರೇಕೆರೂರ 43, ಬ್ಯಾಡಗಿ 28, ಹಾನಗಲ್ಲ 19, ಶಿಗ್ಗಾಂವಿ ತಾಲೂಕಿನ 24 ಹಾಗೂ ಇತರೆ ಆರು ಜನರು ಬಿಡುಗಡೆ ಹೊಂದಿದ್ದಾರೆ.

ಪುರಸಭೆ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ

ಬಂಕಾಪುರ ಪಟ್ಟಣದ ಪುರಸಭೆ ಆವರಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಸಾರ್ವಜನಿಕರ ಸ್ವ್ಯಾಬ್ ಸಂಗ್ರಹ ಮುಂದುವರಿದಿದ್ದು, ಈವರೆಗೆ 95 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ ಒಬ್ಬರಿಗೆ ಮಾತ್ರ ರ್ಯಾಪಿಡ್ ಟೆಸ್ಟ್​ನಲ್ಲಿ ಪಾಸಿಟಿವ್ ಬಂದಿದೆ. ಸ್ವ್ಯಾಬ್ ಫಲಿತಾಂಶ ಇನ್ನೂ ಬರಬೇಕಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಕೋವಿಡ್ ಕೇಂದ್ರದಲ್ಲಿ ಉಚಿತವಾಗಿ ರ್ಯಾಪಿಡ್ ಹಾಗೂ ಗಂಟಲ ದ್ರವ ಪರೀಕ್ಷೆಗೆ ಒಳಗಾಗಬೇಕು ಎಂದು ಪುರಸಭೆ ನೈರ್ಮಲ್ಯ ಅಧಿಕಾರಿ ರೂಪಾ ನಾಯ್ಕ ಮನವಿ ಮಾಡಿದ್ದಾರೆ.