ಜಿಲ್ಲೆ

ಜಿಲ್ಲೆಯಲ್ಲಿ ಮತ್ತೊಂದು ಕರೊನಾ ಪ್ರಕರಣ

ಕಲಬುರಗಿ: ಕಳೆದೆರಡು ದಿನಗಳಿಂದ ಕರೊನಾ ಮುಕ್ತವಾಗಿದ್ದ ಜಿಲ್ಲೆಯಲ್ಲಿ ಶನಿವಾರ ಮತ್ತೊಂದು ಪ್ರಕರಣ ವರದಿಯಾಗಿದೆ. ಹೀಗಾಗಿ ಇಲ್ಲಿಯವರೆಗೆ ಒಟ್ಟು ಸೋಂಕಿತರ ಸಂಖ್ಯೆ 135ಕ್ಕೇರಿದಂತಾಗಿದೆ. ಗುರುವಾರ ಮತ್ತು ಶುಕ್ರವಾರ ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣ ದಾಖಲಾಗದ್ದರಿಂದ ಜನತೆ ಮತ್ತು ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.
ಹೊಸದಾಗಿ ಪತ್ತೆಯಾಗಿರುವ ಪ್ರಕರಣ ಅಫಜಲಪುರ ತಾಲೂಕಿನ ರಾಮನಗರ ಗ್ರಾಮದ ಕ್ವಾರಂಟೈನ್ ಕೇಂದ್ರದಲ್ಲಿದ್ದ 26 ವರ್ಷದ ಯುವಕನಾಗಿದ್ದಾನೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ. ಈತನನ್ನು ಸಧ್ಯಕ್ಕೆ ಕಲಬುರಗಿಯಲ್ಲಿರುವ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 135 ಸೋಂಕಿತ ಪ್ರಕರಣಗಳಿದ್ದು, ಇವುಗಳಲ್ಲಿ ಏಳು ಜನ ಮೃತರಾಗಿದ್ದು 62 ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು 66 ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 6370 ಜನ ಶಂಕಿತರ ರಕ್ತ, ಗಂಟಲು ಕ ಟೆಸ್ಟ್ಗೆ ಕಳುಹಿಸಲಾಗಿದ್ದು, 6136 ಜನರ ನೆಗೆಟಿವ್ ರಿಪೋರ್ಟ್​ ಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. 162 ಜನರ ಪರೀಕ್ಷಾ ವರದಿಗೆ ಕಾಯಲಾಗುತ್ತಿದೆ. ಒಟ್ಟು 27 ಕಂಟೇನ್ಮೆಂಟ್ ಜೋನ್ಗಳಿದ್ದು ಅವುಗಳಲ್ಲಿ 21 ಸಕ್ರೀಯವಾಗಿವೆ. ಈ ಜೋನ್ಗಳಡಿ 49631 ಮನೆಗಳ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದೆ.
ಪ್ರೈಮರಿ ಕಾಂಟ್ಯಾಕ್ಟ್ಸ್ 1031, ಸೆಕೆಂಡರಿ ಕಾಂಟ್ಯಾಕ್ಟ್ಸ್ 3359, ವಿದೇಶದಿಂದ ಬಂದವರು 488 ಜನರನ್ನು ಗುರುತಿಸಲಾಗಿದೆ. ಹೋಂ ಕ್ವಾರಂಟೈನ್ನಲ್ಲಿ 995 ಜನರನ್ನು ಇರಿಸಲಾಗಿದೆ. ಈವರೆಗೆ 28 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿದ್ದ 1622 ಜನರನ್ನು ಮುಕ್ತಗೊಳಿಸಲಾಗಿದೆ. 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿದ್ದ 1817 ಜನರನ್ನು ಮುಕ್ತಗೊಳಿಸಿ ಈ ನಂತರವೂ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಸ್ವಯಂ ಪ್ರೇರಣೆಯಿಂದ ವರದಿ ಮಾಡುವಂತೆ ಸೂಚಿಸಲಾಗಿದೆ. 51ಜನರನ್ನು ಇಎಸ್ಐಸಿ ಐಸೋಲೇಟೆಡ್ ವಾಡರ್್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮತ್ತಿಬ್ಬರು ಗುಣಮುಖ
ಕರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತಿಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದ್ದಾರೆ. ಕಾಳಗಿ ತಾಲೂಕು ಕೋಡ್ಲಿ ಗ್ರಾಮದ 37 ವರ್ಷದ ಯುವಕ (ಪಿ-642) ಮತ್ತು ಕಲಬುರಗಿ ನಗರದ ಮೊಮಿನಪುರ ಪ್ರದೇಶದ 72 ವರ್ಷದ ವೃದ್ಧ (ಪಿ-807) ಸೋಂಕಿನಿಂದ ವಾಸಿಯಾಗಿ ಬಿಡುಗಡೆಗೊಂಡಿದ್ದಾರೆ.