filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41; 
ಜಿಲ್ಲೆ

ಜಿಲ್ಲೆಯಾದ್ಯಂತ ತುಂತುರು ಮಳೆ

ಚಾಮರಾಜನಗರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆ ಸುರಿಯಿತು.

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆಯಿಂದಲೇ ದಟ್ಟವಾದ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಗ್ರಾಮೀಣ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯು ಸುರಿಯಿತು. ಜಿಲ್ಲಾ ಕೇಂದ್ರವನ್ನು ಒಳಗೊಂಡಂತೆ ಕೆಲವು ಭಾಗದಲ್ಲಿ ನಿರಂತರವಾಗಿ ತುಂತುರು ಮಳೆ ಸುರಿಯಿತು. ಪರಿಣಾಮವಾಗಿ ಬೆಳಗ್ಗಿನ ವೇಳೆಯಲ್ಲಿ ಕಚೇರಿ ಕೆಲಸಗಳಿಗೆ ಹೋಗುವವರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸಿದರು.

ದ್ವಿಚಕ್ರ ವಾಹನ ಸವಾರರು ಆಗಾಗ ಬರುತ್ತಿದ್ದ ತುಂತುರು ಮಳೆಯಿಂದ ಸಮಸ್ಯೆ ಅನುಭವಿಸಿದರು. ಕೆಲವರು ಮಳೆಯಿಂದ ರಕ್ಷಣೆ ಪಡೆಯಲು ಅಂಗಡಿ, ಮುಂಗಟ್ಟುಗಳ ಮುಂದೆ ನಿಲ್ಲುತ್ತಿದ್ದರು. ಒಟ್ಟಾರೆಯಾಗಿ ತುಂತುರು ಮಳೆಯಿಂದಾಗಿ ಆಗಾಗ್ಗೆ ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಯಿತು.