ಜಿಲ್ಲೆ

ಜೀವ ಹಾನಿಯಾಗದಂತೆ ಎಚ್ಚರ ವಹಿಸಿ

ಯಾದಗಿರಿ: ಭೀಮಾ ಹಾಗೂ ಕೃಷ್ಣಾ ನದಿ ಸೇರಿ ಜಲಾಶಯಗಳ ವ್ಯಾಪ್ತಿಯಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಜೀವ ಹಾನಿಯಾಗದಂಣತೆ ಎಚ್ಚರಿಕೆ ವಹಿಸಬೇಕು ಎಂದು ಜಿ¯್ಲÁಧಿಕಾರಿ ಡಾ.ಸುಶೀಲಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿ¯್ಲÁಧಿಕಾರಿಗಳ ಕಚೇರಿಯಲ್ಲಿ ಬುಧವಾರ ಈ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಎರಡೂ ನದಿ ತೀರದಲ್ಲಿ ಯಾರು ಹೋಗದಂತೆ ನಿಗಾ ವಹಿಸಬೇಕು. ನದಿಗಳ ಪಾತ್ರದಲ್ಲಿ, ಜಲಾಶಯ ವ್ಯಾಪ್ತಿಯಲ್ಲಿ ನೀರು ಕುಡಿಯಲು ಹೋಗುವುದಾಗಲಿ, ಈಜಲು, ಬಟ್ಟೆ ತೊಳೆಯಲು, ದನಕರ ಮೇಯಿಸಲು ಹೋಗದಂತೆ ಬೋರ್ಡ್ ಹಾಕುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೋಟಿಸ್ ಬೋರ್ಡ್ ಮೂಲಕ ಮಾಹಿತಿ ನೀಡಬೇಕು. ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ತಿಳಿ ಹೇಳಬೇಕು. ಇತ್ತೀಚೆಗೆ ಮಾಚನೂರ ಗ್ರಾಮದ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿz್ದÁರೆ. ಈ ಹಿನ್ನೆಲೆಯಲ್ಲಿ ಎಲ್ಲ ನೋಡಲï ಅಧಿಕಾರಿಗಳು, ಆಯಾ ತಹಸೀಲ್ದಾರರು, ಪೋಲಿಸ್ ಅಧಿಕಾರಿ ಸಿಬ್ಬಂದಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒ, ಗ್ರಾಪಂ ಸಿಬ್ಬಂದಿ ಹಾಗೂ ಸಂಬAಧಿಸಿದ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಮಾನವ ಹಾಗೂ ಜಾನುವಾರುಗಳಿಗೆ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.

ಜಿ¯್ಲೆಯಲ್ಲಿ ಕುಡಿಯಲು ಅಶುದ್ಧ ನೀರು ಪೂರೈಕೆಯಾಗದಂತೆ ನಿಗಾ ವಹಿಸಬೇಕು. ಕುಡಿಯುವ ನೀರು ದುರಸ್ತಿಯಿರುವ ಪೈಪ್‌ಲೈನ್‌ಗಳನ್ನು ತP್ಷÀಣ ದುರಸ್ತಿಗೊಳಿಸಬೇಕು. ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು. ಈವರೆಗೆ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಕುರಿತ ವರದಿ ಸಲ್ಲಿಸಬೇಕು ಎಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಎಸ್‌ಪಿ ಪೃಥ್ವಿಕ್ ಶಂಕರ್, ಅಪರ್ ಜಿ¯್ಲÁಧಿಕಾರಿ ರಮೇಶ ಕೋಲಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ಇತರರಿದ್ದರು.