ಜಿಲ್ಲೆ

ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ

ಚಾಮರಾಜನಗರ: ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಸೆಪ್ಟೆಂಬರ್-2025ರ ಮಾಹೆಯ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದ ಎರಡನೇ ಮಹಡಿಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.