ಜಿಲ್ಲೆ

ಜು.21ರಂದು ಮಹಿಳಾ ಸಂಘದ ವಾರ್ಷಿಕೋತ್ಸವ

ಹಾಸನ: ಜಿಲ್ಲಾ ನೇಕಾರ ಕುರುಹಿನ ಶೆಟ್ಟಿ ಮಹಿಳಾ ಸಂಘದ ವತಿಯಿಂದ ಜುಲೈ 21ನೇ ಭಾನುವಾರದಂದು ಮಹಿಳಾ ಸಂಘದ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಜಿಲ್ಲಾ ನೇಕಾರರ ಮಹಿಳಾ ಒಕ್ಕೂಟದ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಪ್ರೇಮಮ್ಮಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಸಮಾರಂಭದಲ್ಲಿ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಆರೋಗ್ಯ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲಾ ನೇಕಾರ ಕುರುಹಿನ ಶೆಟ್ಟಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಿದ್ದು ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24 ನೇ ಸಾಲಿನಲ್ಲಿ ಯಾವುದೇ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ, ಮತ್ತು ಯಾವುದೇ ಸ್ನಾತಕೋತ್ತರ ಪದವಿ ಪಡೆದಿರುವ ಹಾಸನ ಜಿಲ್ಲೆಯಲ್ಲಿ ವಾಸವಾಗಿರುವ ಕುರುಹಿನ ಶೆಟ್ಟಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಜು.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9844912489 ಮತ್ತು 7899065519 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.