ಜಿಲ್ಲೆ

ಜು.27 ರಂದು ಅಭಿನಂದನಾ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾ ಲೇಖಕರ ಸಂಘದ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಆರ್.ದಿಲೀಪ್‌ಕುಮಾರ್ ಅವರಿಗೆ ಜು.27 ರಂದು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಸ್ವಾಮಿ ಪೊನ್ನಾಚಿ ಉದ್ಘಾಟಿಸುವರು. ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷ ರೇಚಂಬಳ್ಳಿ ದುಂಡುಮಾದಯ್ಯ ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ಪುರಸ್ಕೃತ ಪಚ್ಚೆಯ ಜಗುಲಿ ಕೃತಿಯ ಕುರಿತು ಸಾಹಿತಿ ಮಹೇಶ್ ಹರವೆ ಮಾತನಾಡಲಿದ್ದಾರೆ. ಕೊಳ್ಳೇಗಾಲ ಸಾಹಿತ್ಯ ಮಿತ್ರಕೂಟ ಅಧ್ಯಕ್ಷ ಬಾಳಗುಣಸೆ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಲೇಖಕರ ಸಂಘದ ಕಾರ್ಯದರ್ಶಿ ಸೋಮಶೇಖರ್ ಬಿಸಲವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.