ಜಿಲ್ಲೆ

ಜು.31ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

ಬಾಗಲಕೋಟೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಾಗಲಕೋಟೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.31 ಸೋಮವಾರ ನವನಗರದ ಬಿ.ಆರ್. ಅಂಬೇಡ್ಕರ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ,ಪ್ರತಿಭಾ ಪುರಸ್ಕಾರ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಮಾಡಲಿದ್ದಾರೆ. ಬೆಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಶಯ ನುಡಿಗನ್ನು ಆಡಲಿದ್ದಾರೆ. ಅಧ್ಯಕ್ಷತೆ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದಲಭಂಜನ ವಹಿಸಲಿದ್ದಾರೆ. ಪ್ರಶಸ್ತಿ ಪ್ರದಾನವನ್ನುಶಾಸಕರಾದ ಎಚ್.ವಾಯ್. ಮೇಟಿ ಮಾಡಲಿದ್ದಾರೆ, ಪ್ರತಿಭಾ ಪುರಸ್ಕಾರವನ್ನು ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಂ. ನೇರವೇಸಲಿದ್ದಾರೆ. ಮುಖ್ಯಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಬೆಂಗಳೂರಿನ ಕಾನಿಪ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ, ಕಾನಿಪ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಪುಂಡಲೀಕ ಬಾಳೋಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯರಾದ ಮಹೇಶ ಎಸ್. ಅಂಗಡಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ
ದಿ.ಶ್ರೀಶೈಲ ಅಂಗಡಿ ಇವರ ಸ್ಮರಣಾರ್ಥ 'ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿಯನ್ನು ಕೆಲೂರಿನ ಪತ್ರಕರ್ತ ಶಂಕರ ಮಂಡಿ ಅವರಿಗೆ,
ದಿ.ಶರಣಬಸವರಾಜ ಎಚ್. ಜಿಗಜಿನ್ನಿ ಇವರ ಸ್ಮರಣಾರ್ಥ ಹಿರಿಯ ಪತ್ರಕರ್ತ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ವಿಠಲ ಬಲಕುಂದಿ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಬಾಗಲಕೋಟೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಕಸ್ತೂರಿ ಪಾಟೀಲ ,ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಎಸ್. ಕಲ್ಯಾಣಿ , ಬಾಗಲಕೋಟೆ ಕಾನಿಪ ಸರ್ವಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕು ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.