ಬಾಗಲಕೋಟೆ: ಗುರುಸಿದ್ದೇಶ್ವರ ಪತ್ತಿನ ಸಹಕಾರಿ ಸಂಘದ ತೃತೀಯ ಶಾಖೆಯನ್ನು ನವನಗರದ ಸೆಕ್ಟರ್ ಸಂಖ್ಯೆ ೩ರಲ್ಲಿ ನಿರ್ಮಿಸಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವನ್ನು ಜು. ೨೧ ರಂದು ಬೆಳಿಗ್ಗೆ ೧೦:೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್‌ನ ಸಲಹಾ ಸಮಿತಿ ಅಧ್ಯಕ್ಷ ಆರ್.ಎಸ್.ವಸ್ತ್ರದ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಈಗಾಗಲೇ ಎರಡು ಶಾಖೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದರಿಂದ ಮೂರನೇ ಶಾಖೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಗಿರಿಸಾಗರದ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಬಿಲ್‌ಕೆರೂರಿನ ಡಾ. ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ಬ್ಯಾಂಕ್‌ನ ನೂತನ ಶಾಖೆ ಉದ್ಘಾಟಿಸಲಿದ್ದು, ಬೀಳಗಿ ಶಾಸಕ ಜೆ.ಟಿ.ಪಾಟೀಲ ಲಾಕರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಗಣಕಯಂತ್ರ ಶಾಸಕ ಎಚ್.ವೈ.ಮೇಟಿ ಉದ್ಘಾಟಿಸಲಿದ್ದು, ವಿ.ಪ ಸದಸ್ಯ ಎಚ್.ಆರ್.ನಿರಾಣಿ, ಮಾಜಿ ಸಚಿವ ಎಸ್.ಆರ್.ಪಾಟೀಲ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಬ್ಯಾಂಕ್‌ನ ಉಪಾಧ್ಯಕ್ಷ ಫಕೀರಯ್ಯ ಮಠಪತಿ, ನಿರ್ದೇಶಕರಾದ ಸಿದ್ದಯ್ಯ ಚೌಕೀಮಠ, ಸದಸ್ಯರಾದ ಎಸ್.ಪಿ.ಹಳ್ಳೂರಮಠ ಇತರರಿದ್ದರು.