ಬಾಗಲಕೋಟೆ: ಮಾಜಿ ಹಾಗೂ ಹಾಲಿ ಪ್ಯಾರಾಮಿಲಿಟರಿ ಯೋಧರ ಕಲ್ಯಾಣ ಅಭಿವೃದ್ಧಿ ಸಂಘದಿಂದ ೨೫ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಜು.೨೫ ರಂದು ನವನಗರದ ಸಾಂಸ್ಕೃತಿಕ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿದ್ಧಲಿಂಗಯ್ಯ ವಸ್ತ್ರದ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಜನರಿಗೆ ದೇಶಭಕ್ತಿ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಅರೆಸೇನಾ ಪಡೆಯ ಎಲ್ಲ ಮಾಜಿ ಯೋಧರು ಹಾಗೂ ದೇಶದ ನವ ಶಕ್ತಿಗಳಾದ ಯುವಕರಿಂದ ಅಂದು ಬೆಳಗ್ಗೆ ೮ ಗಂಟೆಗೆ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಿಂದ ಬೈಕ್ ರ‍್ಯಾಲಿಯು ಹಳೇ ಬಸ್ ನಿಲ್ದಾಣ ಮಾರ್ಗವಾಗಿ ರೈಲ್ವೆ ನಿಲ್ದಾಣ, ರೋಟರಿ ಕ್ಲಬ್ ಸರ್ಕಲ್, ಎಪಿಎಂಸಿ ಸರ್ಕಲ್, ಡಿ.ಸಿ.ಆಫೀಸ್, ಎಸ್ ಪಿ ಆಫೀಸ್ ಸರ್ಕಲ್, ಎಸ್.ಬಿ.ಐ, ಸಿಎಂಸಿ ಸರ್ಕಲ್, ಜಿಲ್ಲಾ ಆಸ್ಪತ್ರೆ, ಕಾಳಿದಾಸ ಸರ್ಕಲ್, ಯಮನೂರಪ್ಪ ದೇವಾಲಯದ ಮಾರ್ಗವಾಗಿ ಕಲಾ ಭವನಕ್ಕೆ ತಲುಪಲಿದೆ ಎಂದರು.
ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಕಮತಗಿ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಪಿ.ಸಿ.ಗದ್ದಿಗೌಡರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಜ್ಯೋತಿ ಬೆಳಗಿಸಲಿದ್ದಾರೆ. ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಭೀಮಸೇನ ಚಿಮ್ಮನಕಟ್ಟಿ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಜಿಲ್ಲಾಽಕಾರಿ ಜಾನಕಿ ಕೆ.ಎಂ., ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನಿವೃತ್ತ ಮಹಾ ನಿರೀಕ್ಷಕ ಕೆ.ಆರ್ಕೇಶ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಜಿ.ಪಂ.ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ ಭಾಗವಹಿಸುವರು ಎಂದು ತಿಳಿಸಿದರು.
ಖಂಡರಾದ ಗಿರೀಶ ಸರಗಣಾಚಾರಿ, ಪ್ರಭುಲಿಂಗಯ್ಯ ಕಾಳಹಸ್ತಿಮಠ, ಮಲ್ಲಪ್ಪ ಬೆಳಗಲ್, ಶಂಕ್ರಪ್ಪ ಮಲ್ಲಾಪುರ ಇತರರು ಇದ್ದರು.