ಜಿಲ್ಲೆ

ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂ.12ರಂದು ಹಮ್ಮಿಕೊಳ್ಳಲಾಗಿದೆ.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಉದ್ಘಾಟಿಸುವರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಈಶ್ವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಪಾಲ್ಗೊಳ್ಳುವರು. ಬಚ್ಚನ್ ಬಚಾವೋ ಆಂದೋಲನ ರಾಜ್ಯ ಸಂಯೋಜಕರಾದ ಬಿನುವರ್ಗಿಸ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.