ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.14ರಂದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗಾಳಿಪುರ ಫೀಡರ್‌ನ ಸೋಮವಾರಪೇಟೆ, ಸತ್ತಿ ರಸ್ತೆ, ರಹಮತ್ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.