ಜಿಲ್ಲೆ

ಜೂ.18ರಂದು ಮಹದೇಶ್ವರ ಸ್ವಾಮಿ ದೇವಸ್ಥಾನದ ಗೋಲಕ ಹಣ ಎಣಿಕೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯ ಜೂ.18ರಂದು ನಡೆಯಲಿದೆ.

ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಬೆಳಗ್ಗೆ ಕೊಳ್ಳೇಗಾಲ ಶಾಖೆಯ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ಸಹಯೋಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.