ಜಿಲ್ಲೆ

ಜೂ.22 ರಂದು ಶಿವು ಜನಸ್ನೇಹಿ ಟ್ರಸ್ಟ್ ಉದ್ಘಾಟನೆ

ಚಾಮರಾಜನಗರ: ನಗರದ ಸಿಮ್ಸ್ ಆಸ್ಪತ್ರೆಯ ಸಮೀಪ ಜೂ.22 ರಂದು ಶಿವು ಜನಸ್ನೇಹಿ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮರಿಯಾಲದ ಶ್ರೀಮುರುಘಾ ರಾಜೇಂದ್ರ ಮಠದ ಪೀಠಾಧ್ಯಕ್ಷ ಶ್ರೀಇಮ್ಮಡಿ ಮುರುಘಾ ರಾಜೇಂದ್ರ ಸ್ವಾಮೀಜಿ ಸಾನಿಧ್ಯವಹಿಸುವರು. ರೈತ ಹೋರಾಟಗಾರ ಕಾಳನಹುಂಡಿ ಗುರುಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮೂಳೆ ಮತ್ತು ಕೀಲು ತಜ್ಞ ಡಾ.ಕೃಷ್ಣಪ್ರಸಾದ್ ಸೇವಾ ಚಟುವಟಿಕೆಗಳ ಛಾಯಾಚಿತ್ರ ಅನಾವರಣ ಮಾಡುವರು.

ಕುರುಬರ ಸಂಘದ ತಾಲೂಕು ಅಧ್ಯಕ್ಷ ಆರ್.ಉಮೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶೇಷಾದ್ರಿ, ರೋಟರಿ ಅಧ್ಯಕ್ಷ ಬಿ.ವಿ.ವೆಂಕಟನಾಗಪ್ಪ, ಮಾಜಿ ಅಧ್ಯಕ್ಷ ದೊಡ್ಡರಾಯಪೇಟೆ ಗಿರೀಶ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.