ಜಿಲ್ಲೆ

ಜೂ.8 ರವರೆಗೆ ಅವಧಿ ವಿಸ್ತರಣೆ

ಚಾಮರಾಜನಗರ: ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯಲ್ಲಿನ ಜಾತಿಗಳ ದತ್ತಾಂಶ ಸಂಗ್ರಹಕ್ಕಾಗಿ ಕೈಗೊಂಡಿರುವ ಸಮೀಕ್ಷೆ ಸಂಬಂಧ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಶಿಬಿರ ಹಾಗೂ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಅವಧಿಯನ್ನು ಜೂ.8 ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ 2025 ಅನ್ನು ನಡೆಸಲು ನಿಗದಿ ಮಾಡಿದ್ದ ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್) ಹಾಗೂ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಅವಧಿಯನ್ನು ಜೂ. 8ರವರೆಗೆ ವಿಸ್ತರಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿಗಳು ಪತ್ರದ ಮೂಲಕ ತಿಳಿಸಿದ್ದಾರೆ. ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ಹಾಗೂ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಜೂನ್ 2 ರಿಂದ 8 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.