ಬಾಗಲಕೋಟೆ ತೋಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶನಾಲಯದ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತೋವಿವಿಯ ಕುಲಪತಿ ಡಾ.ವಿಷ್ಣುವರ್ಧನ ಮಾತನಾಡಿದರು. ತೋವಿವಿಯ ವಿಸ್ತರಣಾ ನಿರ್ದೇಶಕ ಮಹಾದೇವ ಮುರಗಿ, ಶಿಕ್ಷಣ ನಿರ್ದೇಶಕ ಡಾ.ಎನ್.ಕೆ.ಹೆಗಡೆ, ಸಂಶೋಧನ ನಿರ್ದೇಶಕ ಡಾ.ಬಿ.-Àಕೃದ್ದಿನ್, ವಿಸ್ತರಣಾ ನಿರ್ದೇಶಕ ಡಾ.ವೆಂಕಟೇಶಲು ಇದ್ದರು. 
ಜಿಲ್ಲೆ

ಜೂ.೧೦ ರಂದು ತೋಟಗಾರಿಕೆ ವಿವಿ ೧೪ನೇ ಘಟಿಕೋತ್ಸವ

ಬಾಗಲಕೋಟೆ: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೧೪ನೇ ಘಟಿಕೋತ್ಸವ ಸಮಾರಂಭವನ್ನು ಜೂ.೧೦ ರಂದು ಹಮ್ಮಿಕೊಳ್ಳಲಾಗಿದೆ ಎಂದು ತೋವಿವಿಯ ಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.

ತೋಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶನಾಲಯದ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋವಿವಿಯ ಉದ್ಯಾಗಿರಿಯ ಸಭಾಂಗಣದಲ್ಲಿ ಜರುಗುವ ಕಾರ್ಯಕ್ರಮದ ಅಧ್ಯಕ್ಷತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದು, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಉಪಸ್ಥಿತಿರುವರು. ಹೈದ್ರಾರಾಬಾದ್‌ನ ಅರೆ-ಶುಷ್ಕ ಉಷ್ಣವಲಯದ ಅಂತರರಾಷ್ಟಿçÃಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾನಿರ್ದೇಶಕ ಡಾ.ಹಿಮಾಂಶು ಪಾಠಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದರು.

ಘಟಿಕೋತ್ಸವದಲ್ಲಿ ೫೦೮ ಬಿ.ಎಸ್ಸಿ ತೋಟಗಾರಿಕೆ ಮತ್ತು ಬಿಟೆಕ್ ವಿದ್ಯಾರ್ಥಿಗಳು, ಎಂಎಸ್ಸಿ ಪದವಿ ಕಾರ್ಯಕ್ರಮದಲ್ಲಿ ೧೦ ವಿಭಾಗಗಳಲ್ಲಿ ಉತ್ತೀರ್ಣರಾದ ೧೪೪ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಪಿಎಚ್‌ಡಿ ಕಾರ್ಯಕ್ರಮದಲ್ಲಿ ಬರುವ ೯ ವಿಭಾಗಗಳಲ್ಲಿ ೪೨ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರಧಾನ ಮಾಡಲಾಗುತ್ತಿದೆ. ಸ್ನಾತಕೋತ್ತರ ಪದವಿಯಲ್ಲಿ ಆಯಾ ವಿಷಯಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ೨೫ ಹಾಗೂ ದಾನಿಗಳಿಂದ ೭೦ ಚಿನ್ನದ ಪದಕಗಳು ಸೇರಿ ಒಟ್ಟು ೯೫ ಚಿನ್ನದ ಪದಕಗಳನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಾಗಲಕೋಟೆ ತೋವಿವಿ ರಾಜ್ಯದ ಏಕೈಕ ಮತ್ತು ದೇಶದ ಮೂರನೇ ತೋಟಗಾರಿಕೆ ವಿಶ್ವವಿದ್ಯಾಲಯವಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಿ.ಎಸ್ಸಿ ತೋಟಗಾರಿಕೆ ಪದವಿಯಲ್ಲಿ ೨೩೦೨, ಬಿ.ಟೆಕ್ ಪದವಿಯಲ್ಲಿ ೧೨೩, ಎಂ.ಎಸ್ಸಿ ಪದವಿಯಲ್ಲಿ ೨೬೬, ಪಿಎಚ್‌ಡಿಯಲ್ಲಿ ೭೫ ಹಾಗೂ ಡಿಪ್ಲೋಮಾದಲ್ಲಿ ೩೩ ಸೇರಿ ಒಟ್ಟು ೨೭೯೯ ವಿದ್ಯಾರ್ಥಿಗಳು ೧೦ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಇದರಲ್ಲಿ ಶೇ.೫೩.೬೩ ರಷ್ಟು ವಿದ್ಯಾರ್ಥಿನಿಯರು ಇದ್ದಾರೆ. ಕಳೆದ ಸಾಲಿನಿಂದ ಹೊಸದಾಗಿ ವಿಜಯಪುರ ಜಿಲ್ಲೆ ಆಲಮೇಲದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪನೆಗೊಂಡಿದ್ದು, ಒಟ್ಟಾರೆಯಾಗಿ ೩೧೫ ಶಿಕ್ಷಕ ಮತ್ತು ೪೩೩ ಶಿಕ್ಷಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಕಳೆದ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನಡೆಸುವ ರಾಷ್ಟç ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ೧೮ ವಿದ್ಯಾರ್ಥಿಗಳು ಕಿರಿಯ ಸಂಶೋಧನಾ ಶಿಷ್ಯವೇತನ, ೫ ವಿದ್ಯಾರ್ಥಿಗಳು ಹಿರಿಯ ಸಂಶೋಧನಾ ಶಿಷ್ಯವೇತನ ಹಾಗೂ ೪೨ ವಿದ್ಯಾರ್ಥಿಗಳು ಎನ್‌ಟಿಎಸ್-ಪಿಜಿ ಶಿಷ್ಯವೇತನ ಸಹಿತ ತೇರ್ಗಡೆ ಹೊಂದಿದ್ದು, ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ. ದೇಶದ ೭ ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಬಾಗಲಕೋಟೆ ತೋವಿವಿ ಕಿರಿಯ ಸಂಶೋಧನಾ ಶಿಷ್ಯವೇತನವನ್ನು ಪಡೆಯುವಲ್ಲಿ ಮೊದಲ ಸ್ಥಾನ ಪಡೆದಿಕೊಂಡಿದೆ ಎಂದು ತಿಳಿಸಿದರು.

ತೋವಿವಿಯ ವಿಸ್ತರಣಾ ನಿರ್ದೇಶಕ ಮಹಾದೇವ ಮುರಗಿ, ಶಿಕ್ಷಣ ನಿರ್ದೇಶಕ ಡಾ.ಎನ್.ಕೆ.ಹೆಗಡೆ, ಸಂಶೋಧನ ನಿರ್ದೇಶಕ ಡಾ.ಬಿ.-Àಕೃದ್ದಿನ್, ವಿಸ್ತರಣಾ ನಿರ್ದೇಶಕ ಡಾ.ವೆಂಕಟೇಶಲು ಸೇರಿದಂತೆ ಇತರರು ಉಪಸ್ಥಿತರಿದ್ದರು.