ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮುತ್ತತ್ತಿಯ ಷ.ಬ್ರ. ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಶಂಭುಗೌಡ ಪಾಟೀಲ, ಸಿದ್ದಪ್ಪ ಗೌಡರ ಜಾತ್ರಾ ಮಹೋತ್ಸವ ಕರ ಪತ್ರ ಬಿಡುಗಡೆಗೊಳಿಸಿದರು.  
ಜಿಲ್ಲೆ

ಜೂ.೯,೧೦ ರಂದು ಬಿಲ್ವಾಶ್ರಮದ ಜಾತ್ರಾ ಮಹೋತ್ಸವ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಬಿಲ್ ಕೆರೂರ ಗ್ರಾಮದ ಬಿಲ್ವಾಶ್ರಮ ಹಿರೇಮಠದ ಮಹಾತಪಸ್ವಿ ಲಿಂ. ರುದ್ರಮುನಿ ಶಿವಾಚಾರ್ಯರ ೪೪ ನೆಯ ಪುಣ್ಯಸ್ಮರಣೋತ್ಸವದ ಅಂಗವಾಗಿ ಜೂ. ೯ ಹಾಗೂ ೧೦ ರಂದು ನೂತನ ರಥದ ಲೋಕಾರ್ಪಣೆ, ಪೀಠಾಽಪತಿ ಸಿದ್ಧಲಿಂಗ ಶಿವಾಚಾರ್ಯರ ಜನ್ಮ ಸುವರ್ಣ ಮಹೋತ್ಸವ, ಗುರು ಪಟ್ಟಾಽಕಾರದ ರಜತ ಮಹೋತ್ಸವ, ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. ೯ ರಂದು ಬೆಳಗ್ಗೆ ೬ ಗಂಟೆಗೆ ಲಿಂ.ರುದ್ರಮುನಿ ಶಿವಾಚಾರ್ಯರ ಕತೃ ಗದ್ದುಗೆಗೆ ರುದ್ರಾಭಿಷೇಕ, ರಥದ ಪೂಜೆ, ಹೋಮ-ಹವನ, ಅಯ್ಯಾಚಾರ, ಶಿವದೀಕ್ಷೆ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ೯ ಗಂಟೆಗೆ ಅನೇಕ ಜನ ಪೂಜ್ಯರು ದಿವ್ಯ ಸಾನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಧರ್ಮ ಧ್ವಜಾರೋಹಣ ಸಮಾರಂಭ ನಡೆಯಲಿದೆ. ಸಂಜೆ ೪ ಗಂಟೆಗೆ ಬಾಗವ್ವ ಬಸಪ್ಪ ರಡ್ಡೇರ ಕುಟುಂಬದವರು ಕೊಡಮಾಡಿರುವ ಬೆಳ್ಳಿ ಉತ್ಸವ ಮೂರ್ತಿಯನ್ನು ಶ್ರೀಮಠಕ್ಕೆ ಸಮರ್ಪಿಸ ಲಾಗುವುದು ಎಂದರು.

ಸ0ಜೆ ೭ ಗಂಟೆಗೆ ಲಿಂ.ರುದ್ರಮುನಿ ಶಿವಾಚಾರ್ಯರ ಪುರಾಣ ಮಹಾಮಂಗಲ ಕಾರ್ಯಕ್ರಮ ಉಜ್ಜೆÊನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಕಾಶಿ ಪೀಠದ ಡಾ.ಚಂದ್ರ ಶೇಖರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ. ನಿಡಗುಂದಿ, ಕಮತಗಿ, ಅಮೀನಗಡ, ಬೀಳಗಿ, ಕುಂದರಗಿ, ಬಾಗೇವಾಡಿ ಶ್ರೀಗಳು ಉಪಸ್ಥಿತಿಯಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜನಪ್ರತಿನಿಽಗಳು, ವಿವಿಧ ಸಂಘ -ಸಂಸ್ಥೆಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜೂ.೧೦ ಬೆಳಗ್ಗೆ ೧೦-೩೦ ಗಂಟೆಗೆ ಸಿದ್ಧಲಿಂಗ ಶಿವಾಚಾರ್ಯರ ಜನ್ಮ ಸುವರ್ಣ ಮಹೋತ್ಸವ, ಗುರು ಪಟ್ಟಾಽಕಾರದ ರಜತ ಮಹೋತ್ಸವ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಜರುಗಲಿದೆ. ಶ್ರೀಮದ್ ಉಜೈನಿ ಸಿಂಹಾಸನಾಽÃಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮೀಜಿ, ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಽÃಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗತ್ಪಾದ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮನಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಗಿರಿ ಸಾಗರ, ಶಿವಗಂಗೆ, ಎಮ್ಮಿಗನೂರ ಶ್ರೀಗಳು ಉಪಸ್ಥಿತರಿರಲಿದ್ದು, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಬಾಗಲಕೋಟೆ ಶಾಸಕ ಎಚ್. ವೈ. ಮೇಟಿ ಉದ್ಘಾಟಿಸಲಿದ್ದಾರೆ. ಸಂಸದ ಪಿ.ಸಿ ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಶಾಸಕರು, ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಅವರು ವಿವರಿಸಿದರು.

ಸಂಜೆ ೪ ಗಂಟೆಗೆ ನೂತನ ರಥದ ಲೋಕಾರ್ಪಣೆಯನ್ನು ಉಜೈನಿ ಹಾಗೂ ಕಾಶೀ ಶ್ರೀಗಳು ಮಾಡಲಿದ್ದು, ನಂತರ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಲಿದೆ ಎಂದು ತಿಳಿಸಿದರು.

ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮುತ್ತತ್ತಿಯ ಷ.ಬ್ರ. ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಶಂಭುಗೌಡ ಪಾಟೀಲ, ಸಿದ್ದಪ್ಪ ಗೌಡರ ಇದ್ದರು.