ಜಿಲ್ಲೆ

ಜೂಜಾಟ ಆಡುತ್ತಿದ್ದವರು ಅಂದರ್

ಚಿಂಚೋಳಿ: ಜೂಜಾಟ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ಸೋಮವಾರ ರಾತ್ರಿ ಭೋಗನಿಂಗದಳ್ಳಿ ಗ್ರಾಮದಲ್ಲಿ ಜರುಗಿದೆ.

7 ಜನರನ್ನು ಬಂಧಿಸಿದ್ದು, ಸುಮಾರು 11,300 ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ.

ಭೋಗನಿಂಗದಳ್ಳಿ ಗ್ರಾಮದಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಹಣಮಂತಪ್ಪ ಬಂಕಲಗಿ ನೇತೃತ್ವದ ತಂಡವು ದಾಳಿ ನಡೆಸಿದೆ. ಇಸ್ಪೇಟ್ ಎಲೆ ಹಾಗೂ ಹಣ ವಶಕ್ಕೆ ಪಡೆಯಲಾಗಿದೆ.

ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.