ಚಾಮರಾಜನಗರ: ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಗ್ರಾಮದ ಸುವರ್ಣಾವತಿ ನದಿ ದಂಡೆಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಹದೇವಸ್ವಾಮಿ, ಶಿವಣ್ಣ, ಶ್ರೀನಿವಾಸ ಹಾಗೂ ಶ್ಯಾಮಸುಂದರ್ ಅವರು ಜೂಡಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಎಸ್.ಕೆ.ಆಕಾಶ್ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಸ್ಥಳದಲ್ಲಿದ್ದ 7,200 ರೂ, ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಮೇಲೆ ಯಳಂದೂರು ಪೊಲೀಸ್‌ಯಲ್ಲಿ ಪ್ರಕರಣ ದಾಖಲಾಗಿದೆ.