ಕಲಬುರಗಿ: ರಾಜ್ಯಾದ್ಯಂತ ಜೆಡಿಎಸ್ ಸಂಟನೆ ಬಲಗೊಳಿಸಿ, ಪಕ್ಷದ ಶಕ್ತಿ ವೃದ್ಧಿಗೆ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಜು.೪ರಂದು ಕಲಬುರಗಿಗೆ ಜೆಡಿಎಸ್ ಯುವ ಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು, ಸದಸ್ಯತ್ವ ಅಭಿಯಾನಕ್ಕೆ ಚಾಲನೆ, ಪಕ್ಷದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್ ತಿಳಿಸಿದರು.
ಜು.೪ರಂದು ಬೆಳಗ್ಗೆ ೧೦ಕ್ಕೆ ನಗರದ ವಿಶ್ವವಿದ್ಯಾಲಯದಿಂದ ಬಳಿಯಿಂದ ಜೆಡಿಎಸ್ ಕಚೇರಿವರೆಗೆ ಬೃಹತ್ ಬೈಕ್ ರ‍್ಯಾಲಿ ನಡೆಸಲಾಗುವುದು. ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿಖಿಲ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿ ೫೮ ದಿನ ೧೧೦ ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಜನತಾದಳ ಕರ‍್ಯಕ್ರಮ ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲೂ ವಿವಿಧ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜೆಡಿಎಸ್ ಕರ‍್ಯಾಧ್ಯಕ್ಷ ದೊಡ್ಡಪ್ಪ ಗೌಡ ಪಾಟೀಲ್ ಮಾತನಾಡಿ, ಮಧ್ಯಾಹ್ನ ೧೨ಕ್ಕೆ ಜೇರ‍್ಗಿ ಪಟ್ಟಣದ ಭೂತಪೂರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೧೨ಕ್ಕೆ ಜೇರ‍್ಗಿ, ಯಡ್ರಾಮಿ ತಾಲೂಕು ಟಕದಿಂದ ಬೃಹತ್ ಸಮಾವೇಶ, ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಸಂಜೆ ನಗರದ ಶರಣಬಸವೇಶ್ವರ ದೇವಸ್ಥಾನ ಹಾಗೂ ಖ್ವಾಜಾ ಬಂದೇ ನವಾಜ್ ರ‍್ಗಾಕ್ಕೆ ಭೇಟಿ ನೀಡಿ, ರ‍್ಶನ ಪಡೆಯಲಿದ್ದಾರೆ. ಇತ್ತೀಚೆಗೆ ನಿಧನರಾದ ಜೆಡಿಎಸ್ ಮುಖಂಡ, ಮಾಜಿ ಮಹಾಪೌರ ಜಿ.ಎಸ್.ರೆಹೆವತ್, ಮಾಜಿ ಉಪಸಭಾಪತಿ ಡೇವಿಡ್ ಸಿಮಿಯೋನ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂದರು.
ಸಮಾವೇಶದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಖಾಶೆಂಪುರ, ಶಾಸಕ ಶರಣಗೌಡ ಕಂದಕೂರ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್, ಮಾಜಿ ಸಚಿವ ಹಣಮಂತಪ್ಪ ಅಲ್ನೋಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ರಾಜ್ಯ ಮಹಿಳಾ ಘಟಕದ ಅಧ್ಯೆ ರಶ್ಮಿ ರಾಮೇಗೌಡ, ರಾಜ್ಯ ಕರ‍್ಯರ‍್ಶಿ ಶಿವಕುಮಾರ ನಾಟಿಕಾರ್ ಭಾಗವಹಿಸಲಿದ್ದಾರೆ ಎಂದರು.