ಜಿಲ್ಲೆ

ಜೆಡಿಎಸ್ ಸೇರಿದ ಕೊತ್ತೇಗಾಲ ಗ್ರಾಪಂ ಮಾಜಿ ಅಧ್ಯಕ್ಷ

ಹನಗೋಡು: ಹೋಬಳಿಯ ಕೊತ್ತೇಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಹಾಗೂ ಅವರ ಪುತ್ರ ಆರ್ ವೆಂಕಟೇಶ್ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಶಾಸಕ ಎಚ್.ಪಿ.ಮಂಜುನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

25 ವರ್ಷಗಳಿಂದ ಜೆಡಿಎಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಅಲ್ಲಿನ ವಾತಾವರಣ ಸರಿ ಹೊಂದದ ಕಾರಣ ಮಂಜುನಾಥ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ರಾಜಣ್ಣ ಹೇಳಿದರು.

ಗ್ರಾಮದ ಮುಖಂಡರಾದ ಜಿ.ವಿಠಲ್, ಗಂಗಾಧರ್ ಸೇರಿದಂತೆ ಇತರರು ಕಾಂಗ್ರೆಸ್ ಸೇರ್ಪಡೆಗೊಂಡರು. ಕಾಂಗ್ರೆಸ್ ಮುಖಂಡರಾದ ಪೊಳ್ಳಯ್ಯ, ಶಶಿ ವೆಂಕಟೇಶ್ ಸತೀಶ್ ಇತರರು ಹಾಜರಿದ್ದರು.