ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಜೆಡಿಎಸ್ ತೊರೆದ ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು, ಸದಸ್ಯ ಎನ್.ಗಣೇಶ್ ಸೇರಿ ಹತ್ತಾರು ಮಂದಿ ಮುಖಂಡರು ಶಾಸಕ ಎನ್.ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ನಗರಸಭೆ ವ್ಯಾಪ್ತಿಯ ಅರಿಶಿಣಕುಂಟೆಯಲ್ಲಿ ಸೋಮವಾರ ಆಯೋಜಿಸಿದ್ದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತರು ಪಕ ್ಷತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ನಗರಸಭೆ ಅಧ್ಯಕ್ಷರು, ಹಾಗೂ ಕೆಲ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ ಎಂದರು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟುಕೊಂಡು ಪಕ್ಷ ಸೇರ್ಪಡೆಯಾದವರಿಗೆ ಪಕ್ಷ ಎಂದಿಗೂ ಕೈಬಿಟ್ಟಿಲ್ಲ. ಪಕ್ಷದಲ್ಲಿ ಹಾಗೂ ಸರ್ಕಾರದ ಹಂತದಲ್ಲಿ ಜವಬ್ದಾರಿ ನೀಡುವ ಕಾರ್ಯ ಮಾಡಿದೆ ಎಂದರು.
ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಮಾತನಾಡಿ, ಶಾಸಕ ಎನ್.ಶ್ರೀನಿವಾಸ್ ಅವರ ಜನಪರ ಕಾರ್ಯಗಳು ಹಾಗೂ ಕ್ಷೇತ್ರ ಅಭಿವೃದ್ಧಿಯನ್ನು ಒಪ್ಪಿ ಪಕ್ಷ ಸೇರ್ಪಡಯಾಗಿದ್ದೇನೆ ಎಂದರು.
ಕಾಂಗ್ರೆಸ್ ಸೇರ್ಪಡೆ: ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು, ಸದಸ್ಯ ಎನ್.ಗಣೇಶ್, ಶಾರದಾಉಮೇಶ್, ಭಾರತಿಬಾಯಿನಾರಾಯಣ್‌ರಾವ್, ತಾಪಂ ಮಾಜಿ ಸದಸ್ಯ ವೀರಣ್ಣ, ಗ್ರಾಪಂ ಸದಸ್ಯ ಅಂಜಿನಪ್ಪ, ಗಣೇಶ್, ಮುಖಂಡ ಕಪಾಲಿ ವೆಂಕಟೇಶ್, ಜಯರಾಮ್ ಹಾಗೂ ಇತರರು ಕಾಂಗ್ರೆಸ್ ಸೇರ್ಪಡೆಯಾದರು.
ನಗರಸಭೆ ಸದಸ್ಯ ಪ್ರದೀಪ್, ನೆ.ಯೋ.ಪ್ರಾಧಿಕಾರ ಅದ್ಯಕ್ಷ ಎಂ.ನಾರಾಯಣ್‌ಗೌಡ, ಸದಸ್ಯ ಬಿ.ಜಿ.ವಾಸು, ಬಮೂಲ್ ನಿರ್ದೇಶಕ ಬಿ.ಆರ್.ಭಾಸ್ಕರ್, ಒಕ್ಕಲಿಗ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಂ.ಕೆ.ನಾಗರಾಜು, ಬಿಎಂಟಿಸಿಮಾಜಿ ನಿರ್ದೇಶಕ ಮಿಲ್ಟ್ರಿ ಮೂರ್ತಿ, ಮುಖಂಡ ಚಿಕ್ಕಣ್ಣ, ಮಂಜುನಾಥಯ್ಯ, ಲಕ್ಷ್ಮೀನಾರಾಯಣ್, ರಾಮಕೃಷ್ಣಪ್ಪ, ಪೈಂಟ್‌ಮಂಜುನಾಥ್, ನರಸಿಂಹಮೂರ್ತಿ ಉಪಸ್ಥಿತರಿದ್ದರು.