ಜಿಲ್ಲೆ

ಜೈಲು ಅಧಿಕಾರಿಗಳಿಗೆ ದರ್ಶನ್ ವೈದ್ಯಕೀಯ ವರದಿ ಸಲ್ಲಿಕೆ

ಬಳ್ಳಾರಿ : ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೊಲೆ ಆರೋಪಿ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಬಿಮ್ಸ್ ನರರೋಗ ತಜ್ಞ ಡಾ. ವಿಶ್ವನಾಥ ಅವರು ಜೈಲು ಅಧಿಕಾರಿಗಳಿಗೆ ಸಲ್ಲಿಕೆ ಮಾಡಿದ್ದಾರೆ.
ನ್ಯೂರೋ ಸರ್ಜನ್ ಡಾ. ವಿಶ್ವನಾಥ ಅವರು ಇತ್ತೀಚೆಗೆ ಜೈಲಿಗೆ ಭೇಟಿ ನೀಡಿ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದರು. ವೈದ್ಯರು ಜೈಲು ಅಧಿಕಾರಿಗಳಿಗೆ ಸಲ್ಲಿಸಿದ ವರದಿಯ ಪ್ರತಿಯನ್ನು ನೀಡುವಂತೆ ದರ್ಶನ್ ಪರ ವಕೀಲರು ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲ ಸುನಿಲ್‌ರಿಂದ ಆರ್‌ಟಿಐ ಅಡಿ ಜೈಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ವೈದ್ಯಕೀಯ ವರದಿಯನ್ನು ಕೇಳಿದ್ದಾರೆ. ಅಲ್ಲದೆ, ದರ್ಶನ್ ಅಪ್ತ ಶ್ರೀನಿವಾಸ್‌ರೆಡ್ಡಿ ಕೂಡ ಆರ್‌ಟಿಐ ಅಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿದವು. ವೈದ್ಯಕೀಯ ವರದಿ ಆಧಾರದ ಮೇಲೆ ದರ್ಶನ್ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಿದ್ದತೆ ನಡೆಯುತ್ತಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ವಾಸ್ತವ್ಯ ಹೂಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮಂಗಳವಾರ ಜೈಲಿಗೆ ಭೇಟಿ ಮಾಡದೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಅಪ್ತ ಮೂಲಗಳು ತಿಳಿಸಿದವು.