ಮಂಗಳೂರು: ನಗರದ ಹೊರ ವಲಯದ ಜೋಕಟ್ಟೆಯಲ್ಲಿ ಯುವತಿಯನ್ನು ಅಡ್ಡಗಟ್ಟಿ ಒಂದು ಸಾವಿರ ರೂ.ದರೋಡೆ ಮಾಡಿದ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಅಜಯ ಕುಮಾರ್ ಮತ್ತು ಸುಭೋದ್ ಕುಮಾರ್ ಬಂಧಿತರು. ಯುವತಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿ ಬಂದ ಆರೋಪಿಗಳು ದರೋಡೆ ಮಾಡಿದ್ದರು.