ಜಿಲ್ಲೆ

ಟಿಟಿಡಿಗೆ ಶಾಸಕ ಆರ್.ವಿ. ದೇಶಪಾಂಡೆ ನಾಮನಿರ್ದೇಶನ

ಹಳಿಯಾಳ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಶ್ರೀ ತಿರುಮಲ ತಿರುಪತಿ ದೇವಸ್ಥಾನದ (ಟಟಿಡಿ) ನೂತನ ಆಡಳಿತ ಮಂಡಳಿ ಸದಸ್ಯರಾಗಿ (ಧರ್ಮದರ್ಶಿಯಾಗಿ) ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರು 2ನೇ ಬಾರಿಗೆ ನಾಮನಿರ್ದೇಶನಗೊಂಡಿದ್ದಾರೆ.
2012ರಿಂದ 2014ರವರೆಗೆ ತಿರುಮಲ ತಿರುಪತಿ ದೇವಸ್ಥಾನದ ಧರ್ಮದರ್ಶಿಯಾಗಿ 2 ವರ್ಷ ಸೇವೆ ಸಲ್ಲಿಸಿದ್ದ ಆರ‌್ವಿಡಿ ಅವರನ್ನು 2ನೇ ಬಾರಿಗೆ ಮತ್ತೊಮ್ಮೆ ಆಯ್ಕೆ ಮಾಡಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ಉಂಟು ಮಾಡಿದೆ.
ಆರ‌್ವಿಡಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ದೇವರ ಅಪ್ಪಟ ಭಕ್ತರಾಗಿದ್ದು, ಪ್ರತಿವರ್ಷ ತಮ್ಮ ಜನ್ಮದಿನದಂದು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುತ್ತಾರೆ.