ಮೈಸೂರು: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ 2025-26ನೇ ಸಾಲಿನ ಡಿಇಎಲ್‌ಇಡಿ (ಟಿಸಿಎಚ್ - ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ)ಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.50, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಶೇ.45ರಷ್ಟು ಅಂಕಗಳು ಪಡೆದಿರಬೇಕು.
ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾಮಾನ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಶುಲ್ಕ 3015 ರೂ. ಮಾತ್ರ ಇರುತ್ತದೆ. ಈ ಕೋರ್ಸ್ ಪೂರ್ಣಗೊಂಡ ನಂತರ ಖಾಸಗಿ ಶಾಲೆಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಡಯಟ್‌ನ ಯಪಿಎಸ್‌ಟಿಇ ನೋಡಲ್ ಅಧಿಕಾರಿ ಚಂದ್ರಶೇಖರ(ದೂ 80500 33244) ಸಂಪರ್ಕಿಸಬಹುದು.