ಲಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವುದು. 
ಜಿಲ್ಲೆ

ಟ್ಯಾಂಕರ್-ಲಾರಿ ಮುಖಾಮುಖಿ ಢಿಕ್ಕಿ

ಬಾಗಲಕೋಟೆ: ಟ್ಯಾಂಕರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ್ದು, ಇಬ್ಬರೂ ಚಾಲಕರು ಗಂಭೀರ ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಕಮತಗಿ-ಅಮೀನಗಡ ಮಾರ್ಗ ಮಧ್ಯದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಟ್ಯಾಂಕರ್ ಹಾಗೂ ಲಾರಿ ಮುಖಾಮುಖಿಯಾಗಿದ್ದರಿಂದ ಲಾರಿ ಉರುಳಿ ರಸ್ತೆ ಬದಿಯಲ್ಲಿ ಬಿದ್ದಿದೆ. ಟ್ಯಾಂಕರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಇಬ್ಬರೂ ಚಾಲಕರು ಗಾಯಗೊಂಡಿದ್ದಾರೆ.
ಓರ್ವ ಚಾಲಕ ಬಾಗಲಕೋಟೆ ಜಿಲ್ಲಾ ಆಸ್ಪತ್ರೆ ಮತ್ತೊರ್ವ ಚಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದವರಿಗೆ ಸೇರಿದ್ದು, ಟ್ಯಾಂಕರ್ ಬಳ್ಳಾರಿ ಮೂಲದ್ದು ಎಂದು ತಿಳಿದು ಬಂದಿದೆ. ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.