ಜಿಲ್ಲೆ

ಟ್ರಾೃಕ್ಟರ್‌ನಲ್ಲಿ ಸಾಗಿಸುತ್ತಿದ್ದ ತೇಗದ ಮರ ವಶ

ಅಕ್ರಮವಾಗಿ ಕಡಿದು ಸಾಗಣೆ ಮಾಡುತ್ತಿದ್ದ ತೇಗದ ಮರ ತುಂಬಿದ್ದ ಟ್ರಾೃಕ್ಟರ್ ಅನ್ನು ಗುಂಡ್ಲುಪೇಟೆ ಪಟ್ಟಣದ ಅರಣ್ಯ ಇಲಾಖೆ ಬಫರ್ ವಲಯ ಅರಣ್ಯಾಧಿಕಾರಿಗಳು ಶುಕ್ರವಾರ ವಾಹನ ಸಮೇತ ವಶಕ್ಕೆ ಪಡೆದರು.

ಗುಂಡ್ಲುಪೇಟೆ: ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕತ್ತರಿಸಿದ ತೇಗದ ಮರಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಶುಕ್ರವಾರ ಸಂಜೆ ವಶಕ್ಕೆ ಪಡೆಯಲಾಗಿದೆ.


ತಾಲೂಕಿನ ಕಂದೇಗಾಲ ಗ್ರಾಮದ ಗುರುಕಾರಪ್ಪ ಎಂಬುವರು ಅರಣ್ಯ ಇಲಾಖೆಯ ಅನುಮತಿ ಪಡಯದೆ ತಮ್ಮಜಮೀನಿನಲ್ಲಿ ಬೆಳೆದಿದ್ದ ನಾಲ್ಕು ತೇಗದ ಮರಗಳನ್ನು ಕತ್ತರಿಸಿದ್ದರು. ಅಲ್ಲದೆ ಪಾಸ್ ಪಡೆದುಕೊಳ್ಳದೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಬಫರ್ ವಲಯದ ಆರ್‌ಎಫ್‌ಒ ಎನ್.ಪಿ. ನವೀನ್‌ಕುಮಾರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಟ್ರ್ಯಾಕ್ಟರ್ ಹಾಗೂ ಮರಗಳನ್ನು ವಶಕ್ಕೆ ಪಡೆದುಕೊಂಡರು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.